HomeLatest NewsBREAKING: 43 ಕ್ರಿಮಿನಲ್ ಕೇಸ್ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಹಿನ್ನಡೆ: ರಾಜ್ಯ ಸರ್ಕಾರದ ಆದೇಶ ರದ್ದು...

BREAKING: 43 ಕ್ರಿಮಿನಲ್ ಕೇಸ್ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಹಿನ್ನಡೆ: ರಾಜ್ಯ ಸರ್ಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ನಿರ್ಧರಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಭಾರಿ ಹಿನ್ನಡೆಯಾಗಿದೆ. 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಆದೇಶ ನೀಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.

ಸರ್ಕಾರದ 2024ರ ಅ.15ರ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಸೇರಿದಂತೆ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿ, ಆದೇಶ ಹೊರಡಿಸಿತ್ತು.

ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ, ಸರ್ಕಾರದ ಆದೇಶವನ್ನು ರದ್ದು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular