BREAKING : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಜನೌಷಧಿ ಕೇಂದ್ರ’ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!


ಬೆಂಗಳೂರು : ಸರ್ಕಾರಿ ಆಸ್ಪತ್ರೆಯಲ್ಲಿ ‘ಜನೌಷಧಿ ಕೇಂದ್ರ’ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹೌದು. ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನ ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದ ಸರ್ಕಾರಕ್ಕೆ ಮುಖಭಂಗವಾಗಿದೆ. ರಾಜ್ಯ ಸರ್ಕಾರ ಆದೇಶವನ್ನ ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ. ವಾದ ವಿವಾದ ಆಲಿಸಿದ ಕೋರ್ಟ್ 120 ಅಡಿ ಚದರ ಜಾಗದಲ್ಲಿ ಜನೌಷಧಿ ಇಟ್ಟು ಕಡಿಮೆ ದರದಲ್ಲಿ ಔಷಧಿ ನೀಡಿದರೆ ನಿಮಗೆ ಏನು ಸಮಸ್ಯೆ..? ಜನೌಷಧಿ ಬಗ್ಗೆ ಯಾರಾದರೂ ದೂರು ಕೊಟ್ಟಿದ್ದೀರಾ ಎಂದು ಸರ್ಕಾರವನ್ನ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.

ಕರ್ನಾಟಕದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚದಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ ಪತ್ರ ಬರೆದಿತ್ತು.ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಅವರಿಗೆ ಸಚಿವ ಜೆ.ಪಿ. ನಡ್ಡಾ ಪತ್ರ ಬರೆದಿದ್ದರು. ಜನೌಷಧಿ ಕೇಂದ್ರದಲ್ಲಿ ಗುಣಮಟ್ಟದ ಔಷಧಗಳು ಕಡಿಮೆ ಬೆಲೆಗೆ ದೊರೆಯುತ್ತಿದ್ದು, ರಾಜ್ಯದ ನಾಗರಿಕರಿಗೆ ಕಳೆದ 10 ವರ್ಷಗಳಲ್ಲಿ 5700 ಕೋಟಿ ರೂ. ಉಳಿತಾಯವಾಗಿದೆ ಎಂದು ಮಾಹಿತಿ ನೀಡಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read