HomeKarnatakaಇಂದಿನಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ

ಇಂದಿನಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ

ಬೆಂಗಳೂರು: ಏಪ್ರಿಲ್ 27ರ ಶನಿವಾರದಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ ನೀಡಲಾಗಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕ ಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳು ಕಾರ್ಯನಿರ್ವಹಿಸುತ್ತವೆ.

ರಜೆ ಅವಧಿಯಲ್ಲಿ ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಮೊದಲಾದ ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತದೆ. ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ- ಫೈಲಿಂಗ್ ಪೋರ್ಟಲ್ ಮೂಲಕ ಇ ಫೈಲಿಂಗ್ ಮಾಡಬಹುದಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್(ನ್ಯಾಯಾಂಗ) ಎಂ. ಚಂದ್ರಶೇಖರ ರೆಡ್ಡಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular