BIG NEWS: ಹುಲಿ ಉಗುರು ಸೇರಿ ವನ್ಯಜೀವಿ ಉತ್ಪನ್ನ ಮಾರಾಟ ತಡೆ, ಜಾಗೃತಿ, ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ

ಬೀದರ್: ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ಯಾವುದೇ ಅಂಗಾಂಗದಿಂದ ಪಡೆದ ಉತ್ಪನ್ನ ಮತ್ತು ವಸ್ತುಗಳ ಮಾರಾಟ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಕೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ.

ಈ ಸಮಿತಿ ವನ್ಯಜೀವಿ ಅಂಗಾಂಗಗಳಿಂದ ಪಡೆದ ಉತ್ಪನ್ನ ಮತ್ತು ವಸ್ತುಗಳ ಮಾರಾಟ ತಡೆಗೆ ಜನಜಾಗೃತಿ ಮೂಡಿಸಲು ಮತ್ತು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಈ ಕುರಿತು ಸೂಚನೆ ನೀಡಲಾಗಿದೆ. ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆಗೆ ನಿರ್ದೇಶನ ನೀಡಲಾಗಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕೈಗೊಂಡ ಕ್ರಮ, ದಾಖಲಾದ ಪ್ರಕರಣ, ಮೊದಲಾದವುಗಳ ಬಗ್ಗೆ ವಾರದೊಳಗೆ ವರದಿ ಸಲ್ಲಿಸಲು ಸಮಿತಿಗೆ ಸೂಚನೆ ನೀಡಲಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ವನ್ಯಜೀವಿಯ ಯಾವುದೇ ಅಂಗಾಂಗದ ಉತ್ಪನ್ನಗಳನ್ನು ಸಂಗ್ರಹಿಸುವುದು, ಬಳಸುವುದು ಅಪರಾಧವಾಗುತ್ತದೆ ಎಂದು ತಿಳಿಸಿದ್ದಾರೆ.

‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಇದಾದ ಬಳಿಕ ಹಲವಾರು ನಟರು, ಸ್ವಾಮೀಜಿಗಳು ಕೂಡ ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ಅಂಗಾಂಗದಿಂದ ಪಡೆದ ಉತ್ಪನ್ನ ವಸ್ತುಗಳನ್ನು ಬಳಸುತ್ತಿರುವ, ಸಂಗ್ರಹಿಸಿರುವ ಆರೋಪ ಕೇಳಿ ಬಂದಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read