HomeLatest Newsಗಂಡು ಮಗುವಿಗೆ ಜನ್ಮ ನೀಡಿದ ಪ್ರೌಢಶಾಲೆ ವಿದ್ಯಾರ್ಥಿನಿ: ಶಿಕ್ಷಕರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು

ಗಂಡು ಮಗುವಿಗೆ ಜನ್ಮ ನೀಡಿದ ಪ್ರೌಢಶಾಲೆ ವಿದ್ಯಾರ್ಥಿನಿ: ಶಿಕ್ಷಕರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಯೊಂದರ 16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮುಖ್ಯ ಶಿಕ್ಷಕ ಮತ್ತು ಶಿಕ್ಷಕರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಬಾಲಕಿಯನ್ನು ವೈದ್ಯರು ಪರೀಕ್ಷಿಸಿದ್ದಾರೆ. ಈ ವೇಳೆ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ನಂತರ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಾಲಕಿ ಮನೆ ಸಮೀಪವಿರುವ 19 ವರ್ಷದ ಖಾಸಗಿ ಕಂಪನಿ ಉದ್ಯೋಗಿಯನ್ನು ಬಂಧಿಸಲಾಗಿದೆ.

ಘಟನೆಯ ಬಳಿಕ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದಾರೆ. ತರಗತಿಗೆ ನಿಯಮಿತವಾಗಿ ಹಾಜರಾಗುತ್ತಿದ್ದರೂ ಬಾಲಕಿಯ ದೈಹಿಕ ಬದಲಾವಣೆ ಗುರುತಿಸಲು ವಿಫಲರಾದ ಕಾರಣ ಶಾಲೆಯ ಮುಖ್ಯ ಶಿಕ್ಷಕ ಮತ್ತು ಇತರೆ ಶಿಕ್ಷಕರಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಶಾಲೆಯಲ್ಲಿ ನಡೆದಿಲ್ಲ. ಆರೋಪಿಗೂ ಶಾಲೆಗೂ ನೇರ ಸಂಬಂಧವಿಲ್ಲ. ಬಾಲಕಿ 9 ತಿಂಗಳ ಗರ್ಭಿಣಿಯಾಗಿದ್ದು ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾಳೆ. ಶಾಲೆಗೆ ನಿತ್ಯವೂ ಬರುತ್ತಿದ್ದ ವಿದ್ಯಾರ್ಥಿನಿಯ ದೈಹಿಕ ಬದಲಾವಣೆ ಗಮನಿಸದಿರುವುದು ನಿರ್ಲಕ್ಷ್ಯಕ್ಕೆ ಸಮಾನವಾಗಿದ್ದರಿಂದ ಶಿಕ್ಷಕರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಬಾಲಕಿಯರ ಆರೋಗ್ಯ ಬೆಳವಣಿಗೆ ವರ್ತನೆಗಳ ಮೇಲೆ ನಿಗಾ ವಹಿಸುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular