HomeLatest Newsರಾಜ್ಯಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್: ಬೆಂಗಳೂರು - ಪುಣೆ ನಡುವೆ ಹೈ ಸ್ಪೀಡ್...

ರಾಜ್ಯಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್: ಬೆಂಗಳೂರು – ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ಗೆ ಕೇಂದ್ರ ಸಚಿವರಿಗೆ ಪ್ರಲ್ಹಾದ್ ಜೋಶಿ ಮನವಿ

ನವದೆಹಲಿ: ಇತ್ತೀಚೆಗೆ ಮಂಡನೆಯಾದ ಕೇಂದ್ರ ಬಜೆಟ್ ಅಲ್ಲಿ ದೇಶದಲ್ಲಿ ಒಟ್ಟು ಏಳು ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಿಸಿರುವ ಕೇಂದ್ರ ಸರ್ಕಾರದಿಂದ ಇದೀಗ ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಕೊಡುಗೆ ನೀಡಲು ಯತ್ನಿಸಲಾಗುತ್ತಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಒತ್ತಾಯದ ಮೇರೆಗೆ ಕರ್ನಾಟಕದಲ್ಲಿ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಗೆ ಚಿಂತನೆ ನಡೆದಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬೆಂಗಳೂರು ಮತ್ತು ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು-ಪುಣೆ ಮಧ್ಯೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಾಗಲಿದೆ. ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ.

ಅಲ್ಲದೇ ಪುಣೆಯಿಂದ ಕರ್ನಾಟಕದ ಆರೇಳು ಜಿಲ್ಲೆಗಳಿಗೆ ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ. ಹಾಗಾಗಿ ಈ ಹೊಸ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular