HomeKarnatakaಬೆಂಗಳೂರು-ಬೆಳಗಾವಿ-ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್

ಬೆಂಗಳೂರು-ಬೆಳಗಾವಿ-ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್

ಕೇಂದ್ರ ಸರ್ಕಾರ 2026-27ನೇ ಸಾಲಿನ ಬಜೆಟ್‌ನಲ್ಲಿ ದೇಶದಲ್ಲಿ 7 ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದೆ. ಈಗ 8ನೇ ಕಾರಿಡಾರ್ ಘೋಷಣೆ ಮಾಡಲು ಬೇಡಿಕೆ ಸಲ್ಲಿಸಲಾಗಿದೆ. ಈ ಕಾರಿಡಾರ್ ಸಹ ಕರ್ನಾಟಕದಲ್ಲಿ ನಿರ್ಮಾಣವಾಗಲಿದೆ.

ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ಮಾಡಿದರು. ಬೆಳಗಾವಿ ಲೋಕಸಭಾ ವ್ಯಾಪ್ತಿಯಡಿ ಒದಗಿಸಬಹುದಾದ ರೈಲು ಸೇವೆಗಳ ಬಗ್ಗೆ ಚರ್ಚಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ಮಂಡಿಸಲಾದ ಕೇಂದ್ರ ಬಜೆಟ್ 2026-27ರಲ್ಲಿ ದೇಶದ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯಡಿ 7 ನಗರಗಳಿಗೆ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಬೆಂಗಳೂರು-ಬೆಳಗಾವಿ-ಮುಂಬೈ ನಡುವೆಯೂ ಸಹ 8ನೇ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಘೋಷಣೆ ಮಾಡುವಂತೆ ಪ್ರಸ್ತಾಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಈ ಮಾರ್ಗದಲ್ಲಿ ಬರುವಂತಹ ಸಣ್ಣ ಮತ್ತು ಮಧ್ಯಮ ನಗರಗಳೂ ಸಹ ಅಭಿವೃದ್ಧಿ ಹೊಂದಲೊಂದು ಅವಕಾಶ ಕಲ್ಪಿಸಿದಂತಾಗುವುದು ಎಂದು ಜಗದೀಶ್ ಶೆಟ್ಟರ್ ಕೇಂದ್ರ ಸಚಿವರಿಗೆ ವಿವರಣೆ ನೀಡಿದ್ದಾರೆ.

ಅಲ್ಲದೇ ಬೆಳಗಾವಿ ಜಿಲ್ಲೆಯ ಪರಕನಟ್ಟಿ, ಗೋಕಾಕ ಶಹರ ಮತ್ತು ಯಾದವಾಡ ಮಾರ್ಗವಾಗಿ ಬಾಗಲಕೋಟೆ ನಗರಕ್ಕೆ ಹೊಂದಿಕೊಂಡು ಸಹ ನೂತನ ರೈಲು ಮಾರ್ಗ ನಿರ್ಮಾಣ ಪರಿಗಣಿಸಲು ಕೋರಿದ್ದಾರೆ. ಪ್ರಸ್ತಾಪಿತ ಮಾರ್ಗದಲ್ಲಿ ಈಗಾಗಲೇ ಹಲವಾರು ಸಿಮೆಂಟ್ ಮತ್ತು ಶುಗರ್ ಫ್ಯಾಕ್ಟರಿಗಳು ಇದ್ದು ಈ ಮಾರ್ಗ ನಿರ್ಮಾಣವಾದಲ್ಲಿ ಸಾರ್ವಜನಿಕರಿಗೆ ಸಂಚರಿಸಲು ತುಂಬಾ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ವಂದೇ ಭಾರತ್ ಸಮಯ ಬದಲಾವಣೆ: ಬೆಳಗಾವಿಯಿಂದ ಹೊರಡುವ ಬೆಳಗಾವಿ- ಬೆಂಗಳೂರು ವಂದೇ ಭಾರರ್ ಎಕ್ಸಪ್ರೆಸ್ ರೈಲು ಬೆಳಗಾವಿಯಿಂದ ಬೆಳಗ್ಗೆ 05:35ಕ್ಕೆ ಹೊರಡುತ್ತದೆ. ಈ ಸಂಚಾರ ಸಮಯವನ್ನು 06:15 ಕ್ಕೆ ಬದಲಾವಣೆ ಮಾಡಿದ್ದಲ್ಲಿ ಇನ್ನು ಹೆಚ್ಚು ಪ್ರಯಾಣಿಕರಿಗೆ ಸಂಚರಿಸಲು ಅನುಕೂಲವಾಗುವುದು ಎಂದು ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ ಮಾಡಿದ್ದಾರೆ.

ಸಚಿವರು ಮನವಿಗಳನ್ನು ಪರಿಶೀಲಿಸಿ ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟ ಭರವಸೆಯನ್ನು ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಶೆಟ್ಟರ್ ತಿಳಿಸಿದ್ದಾರೆ.

ರೈಲ್ವೆ ಬೋರ್ಡ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ಸಂಸದರು ಲೋಕಾಪೂರ-ರಾಮದುರ್ಗ-ಸವದತ್ತಿ-ಧಾರವಾಡ ನಡುವೆ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಅಗತ್ಯವೆನಿಸಿದ ಪೂರ್ವ ಸಮೀಕ್ಷಾ ಕಾರ್ಯ ಕೈಗೊಳ್ಳಲು ಮತ್ತು ಈ ಕುರಿತಾದ ಅವರಲ್ಲಿ ಬಂದಿರುವ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಅಲ್ಲದೆ ಬೆಳಗಾವಿ-ಮಣಗೂರ ನಡುವೆ ಈ ಮೊದಲು ಸಂಚರಿಸುತ್ತಿದ್ದ ರೈಲು ರದ್ದುಗೊಂಡಿದ್ದು ಅದನ್ನು ಪುನಾರಂಭಿಸಿ ಬೆಳಗಾವಿ ನಿವಾಸಿಗಳಿಗೆ ಅನುಕೂಲತೆ ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular