HomeKarnatakaಅನುಕಂಪ ಆಧಾರಿತ ಉದ್ಯೋಗ ನಿರಂತರ ಸೌಲಭ್ಯವಲ್ಲ, ಒಂದು ಸಲದ ನೆರವು: ಹೈಕೋರ್ಟ್ ಮಹತ್ವದ ಆದೇಶ

ಅನುಕಂಪ ಆಧಾರಿತ ಉದ್ಯೋಗ ನಿರಂತರ ಸೌಲಭ್ಯವಲ್ಲ, ಒಂದು ಸಲದ ನೆರವು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅನುಕಂಪ ಆಧಾರಿತ ಉದ್ಯೋಗ ನಿರಂತರ ಸೌಲಭ್ಯವಲ್ಲ, ಸಂಕಷ್ಟದ ಕುಟುಂಬಕ್ಕೆ ತಕ್ಷಣದ ನೆರವು ನೀಡುವ ಒಂದು ಸಲದ ಕ್ರಮ ಎಂದು ಹೈಕೋರ್ಟ್ ಆದೇಶಿಸಿದೆ.

ಕುಟುಂಬದ ಆಧಾರ ಸ್ತಂಭ ಮತ್ತು ಮುಖ್ಯ ಆದಾಯದ ಮೂಲವಾದ ಸರ್ಕಾರಿ ನೌಕರನ ಸಾವಿನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಆತನ ಕುಟುಂಬಕ್ಕೆ ತಕ್ಷಣದ ನೆರವು ನೀಡುವುದೇ ಅನುಕಂಪ ಆಧಾರದ ಮೇಲಿನ ನೇಮಕಾತಿಯ ಮೂಲ ಉದ್ದೇಶವಾಗಿದೆ. ಕೇವಲ ಒಂದು ಸಲದ ಕ್ರಮ ಇದಾಗಿದ್ದು, ನಿರಂತರವಾಗಿ ಲಭ್ಯವಿರುವ ಸೌಲಭ್ಯವನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟು ಆದೇಶ ಹೊರಡಿಸಿದೆ.

ಅನುಕಂಪ ಆಧಾರದಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ನೇಮಕವಾಗಿದ್ದ ಇಬ್ಬರು ನೌಕರರಿಗೆ ಉನ್ನತ ಶೈಕ್ಷಣಿಕ ಅರ್ಹತೆ ಇದೆ ಎನ್ನುವ ಕಾರಣಕ್ಕೆ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(KAT) ನೀಡಿದ ಆದೇಶವನ್ನು ರದ್ದು ಮಾಡಿದ ಹೈಕೋರ್ಟ್ ನಿಂದ ಈ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಮತ್ತು ನ್ಯಾಯಮೂರ್ತಿ ಹೇಮಾ ಕುಲಕರ್ಣಿ ಅವರಿದ್ದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.

ಒಂದು ಸಲ ಅನುಕಂಪದ ಆಧಾರದ ಮೇಲೆ ಸಾರ್ವಜನಿಕ ಉದ್ಯೋಗ ದೊರೆತು ಆ ನೇಮಕಾತಿಯನ್ನು ಸ್ವೀಕರಿಸಿದ ಬಳಿಕ ನೇಮಕಾವಾದ ವ್ಯಕ್ತಿ ನಿರ್ದಿಷ್ಟ ಹುದ್ದೆಗಳಿಗೆ ಅಗತ್ಯ ಅರ್ಹತೆ ಹೊಂದಿದ್ದಾರೆ ಎನ್ನುವ ಕಾರಣಕ್ಕಾಗಿಯೇ ಆ ಅನುಕಂಪದ ಆಧಾರ ಬಳಸಿಕೊಂಡು ಉನ್ನತ ಹುದ್ದೆಗಳು ಉತ್ತಮ ಶ್ರೇಣಿ ಅಥವಾ ಹೆಚ್ಚಿನ ಸೇವಾ ಸೌಲಭ್ಯಕ್ಕಾಗಿ ನಿರಂತರವಾಗಿ ಬೇಡಿಕೆ ಸಲ್ಲಿಸಲು ಅವಕಾಶ ನೀಡುವುದಿಲ್ಲ. ಆ ಯೋಜನೆ ಅಡಿ ಉದ್ದೇಶಿಸಲಾದ ಹುದ್ದೆಗೆ ನೇಮಕಾತಿ ಮಾಡುವ ಮೂಲಕ ಯೋಜನೆಯ ಮೂಲ ಉದ್ದೇಶ ಈಡೇರಿದ ನಂತರ ಮತ್ತೊಂದು ಉನ್ನತ ಹುದ್ದೆ ಪಡೆಯಲು ಅನುಕಂಪದ ಆಧಾರವನ್ನು ಮತ್ತೆ ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕೆ ನೇಮಕವಾದವರು ಹೊಂದಿರುವ ಉನ್ನತ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಗ್ರೂಪ್ ಸಿ ಒಳಗೆ ಒಂದು ಹುದ್ದೆಯಿಂದ ಇನ್ನೊಂದು ಹುದ್ದೆಗೆ ವರ್ಗಾವಣೆ ಮಾಡುವ ಮನವಿಗಳನ್ನು ಪರಿಗಣಿಸುವಾಗ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಬೇಕೆಂದು ಹೈಕೋರ್ಟ್ ತಿಳಿಸಿದೆ.

ನೇರಗುತ್ತಿಗೆ ಆಧಾರದ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ  ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು(ಸಂಖ್ಯೆ01), ಸಹಾಯಕ ತಾಂತ್ರಿಕ ವ್ಯವಸ್ಥಾಪಕರ(ಸಂಖ್ಯೆ-02), ಕಂಪ್ಯೂಟರ್ ಪ್ರೊಗ್ರಾಮರ್ (ಸಂಖ್ಯೆ-01) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ(Resume/CV) ಮತ್ತು ಸಂಬಂದಿತ ದಾಖಲಾತಿಗಳನ್ನು  ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೃಷಿ ಸಂಕೀರ್ಣ, ಎಸ್.ಕರಿಯಪ್ಪ ರಸ್ತೆ,  ಬನಶಂಕರಿ, ಬೆಂಗಳೂರು ಇಲ್ಲಿ ಕಛೇರಿಯ ಅವಧಿಯೊಳಗೆ ಅರ್ಜಿಯನ್ನು ಆಕ್ಟೊಬರ್ 12 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26711594 ಅಥವಾ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular