ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ರಾಜ್ಯದ ಎಲ್ಲಾ ವಿವಿ, ಕಾಲೇಜುಗಳಲ್ಲಿ ಪದವಿ ಪ್ರವೇಶಕ್ಕೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ಅವುಗಳ ಸಂಯೋಜಿತ ಕಾಲೇಜುಗಳಲ್ಲಿ 2023 -24ನೇ ಸಾಲಿನ ಪದವಿ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಗೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ.

ಈ ಶೈಕ್ಷಣಿಕ ಸಾಲಿನಲ್ಲಿ ಮೇ 22 ರಿಂದ ಜುಲೈ 15 ರ ಒಳಗೆ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜುಲೈ 17 ರಿಂದ ತರಗತಿಗಳನ್ನು ಆರಂಭಿಸಿ ನವೆಂಬರ್ 18ಕ್ಕೆ ಮುಕ್ತಾಯಗೊಳಿಸಬೇಕು. ನವೆಂಬರ್ 20 ರಿಂದ ಪರೀಕ್ಷೆ ಆರಂಭಿಸಿ 2024 ರ ಜನವರಿ 15ರೊಳಗೆ ಪರೀಕ್ಷೆ, ಮೌಲ್ಯಮಾಪನ ಮುಗಿಸಿ ಫಲಿತಾಂಶ ಪ್ರಕಟಿಸಬೇಕು.

ಜನವರಿ 16 ರಿಂದ ಎರಡನೇ ಸೆಮಿಸ್ಟರ್ ತರಗತಿಗಳನ್ನು ಆರಂಭಿಸಿ ಮೇ 15ಕ್ಕೆ ಮುಕ್ತಾಯಗೊಳಿಸಬೇಕು. ಮೇ 13 ರಿಂದ ಎರಡನೇ ಸೆಮಿಸ್ಟರ್ ಪರೀಕ್ಷೆ ನಡೆಸಿ ಜೂನ್ 29ರ ಒಳಗೆ ಫಲಿತಾಂಶ ಪ್ರಕಟಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ವಿವಿಗಳು, ಪದವಿ ಕಾಲೇಜುಗಳಿಗೆ ಈ ವೇಳಾಪಟ್ಟಿ ಅನ್ವಯವಾಗುತ್ತದೆ. ಇಂಜಿನಿಯರಿಂಗ್, ಡಿಪ್ಲೋಮೋ ಇತರೆ ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿಗೆ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read