HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯ ಕೋರ್ಸ್ ಆರಂಭ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯ ಕೋರ್ಸ್ ಆರಂಭ

ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಈಗಾಗಲೇ ದಾವಣಗೆರೆ ಮತ್ತು ಚಿಂತಾಮಣಿ ಕಾಲೇಜುಗಳಲ್ಲಿ ಆರಂಭಿಸಿರುವ ಕೋರ್ಸ್ ಗೆ ಉತ್ತಮ ಪ್ರತಿಕ್ರಿಯೆ ಬಂದಿದೆ. ಹೀಗಾಗಿ ಉಳಿದ 11 ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಗಳನ್ನು ಅಳವಡಿಸಲಾಗುವುದು. ಆರಂಭಿಕವಾಗಿ 5 ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭಿಸಲಿದ್ದು, ನಂತರ ಉಳಿದ ಕಾಲೇಜುಗಳಲ್ಲಿಯೂ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

ಖಾಸಗಿ ಕಾಲೇಜುಗಳ ಮಾದರಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕೌಶಲ್ಯ ನೀಡಲು ಸೆಂಟರ್ ಆಫ್ ಎಕ್ಸಲೆನ್ಸ್ ಆರಂಭಿಸಲು ವಿಶ್ವ ಬ್ಯಾಂಕ್ ನಿಂದ ಸಾಲ ಪಡೆಯಲಾಗುತ್ತಿದೆ ಎಂದು ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಸಚಿವ ಎಂ.ಸಿ. ಸುಧಾಕರ್ ಉತ್ತರ ನೀಡಿದ್ದು, ಈಗಾಗಲೇ 11 ಕಾಲೇಜುಗಳಲ್ಲಿ ಕೌಶಲ್ಯ ಕೇಂದ್ರಗಳನ್ನು ತೆರೆಯಲು ಟೊಯೋಟಾದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular