HomeKarnatakaGOOD NEWS: ವಿವಿಗಳಲ್ಲಿ ಖಾಲಿ ಇರುವ 2,800 ಬೋಧಕರ ಹುದ್ದೆಗಳ ಭರ್ತಿ

GOOD NEWS: ವಿವಿಗಳಲ್ಲಿ ಖಾಲಿ ಇರುವ 2,800 ಬೋಧಕರ ಹುದ್ದೆಗಳ ಭರ್ತಿ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕರು, ಬೋಧಕೇತರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಸುಮಾರು 2800 ಬೋಧಕರ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಹುದ್ದೆಗಳನ್ನು ಭರ್ತಿ ಮಾಡುತ್ತಾ ಬಂದಿದ್ದು, ಹಂತ ಹಂತವಾಗಿ ಎಲ್ಲ ಬೋಧಕರು, ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular