ಉಡುಪಿ: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ತೇರ್ಗಡೆಯಾಗಲು ಈ ಮೊದಲು ಇದ್ದ ಕನಿಷ್ಠ 35 ಅಂಕಗಳ ಬದಲಿಗೆ 33ಕ್ಕೆ ಇಳಿಕೆ ಮಾಡಿ ಶಾಲಾ ಶಿಕ್ಷಕರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಡಿದ ಆದೇಶ ಸರಿಯಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಈ ನಿರ್ಧಾರದ ಬಗ್ಗೆ ಮತ್ತಷ್ಟು ಚರ್ಚೆಯಾಗಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಯಾವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನುವ ಮಾಹಿತಿ ಇಲ್ಲ. ಸಂಪುಟ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲಾಗಿದ್ದು, ಮುಖ್ಯಮಂತ್ರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಸರಿಯಾದ ಅಧ್ಯಯನ ನಡೆಯಬೇಕು. ತೇರ್ಗಡೆ ಕನಿಷ್ಠ ಅಂಕ 33ಕ್ಕೆ ಇಳಿಕೆ ಮಾಡಿ ಶಿಕ್ಷಣ ಸಚಿವರು ಮಾಡಿದ ಆದೇಶ ಸರಿಯಲ್ಲವೆನ್ನುವುದು ನನ್ನ ವಯಕ್ತಿಕ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.