HomeKarnatakaBIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಬಲಿಷ್ಠ ಕಾಯ್ದೆ ಜಾರಿಗೆ ಅಧಿಕಾರಿಗಳ ತಂಡ ರಚನೆ

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಬಲಿಷ್ಠ ಕಾಯ್ದೆ ಜಾರಿಗೆ ಅಧಿಕಾರಿಗಳ ತಂಡ ರಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಡೆಸಲಾಗಿದೆ.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲಾಗುವುದು. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ.

ಕಾಯ್ದೆ ಸಂಪೂರ್ಣ ಸಂವಿಧಾನ ಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು.  ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್‌ ಮೆನ್‌ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗುವಂತೆ ಕಾನೂನು ರೂಪಿಸಲಾಗುವುದು.

ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುವುದು. ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ತಾತ್ಕಾಲಿಕವಾಗಿ ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು, ಸಂತ್ರಸ್ತರು ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular