BIG NEWS : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ |Karnataka Cabinet Meeting

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

2021-22ನೇ ಸಾಲಿನ RIDF ಟ್ರಾಂಚ್-27ರಡಿ ನಬಾರ್ಡ್ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ ರೂ.171.91 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಹಾಗೂ ಹೆಚ್ಚುವರಿ ಮೊತ್ತ ರೂ.47.81 ಕೋಟಿಗಳನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದಿಂದ ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಪರಿಪೂರ್ಣ ಶಿಫಲ ಘಟಕಗಳ ಪೂರ್ಣಗೊಳಿಸುವಿಕೆ ಮತ್ತು ಅತ್ಯುತಮ ಕಾರ್ಯಾಚರಣೆ External Electrification, Installation of Diesel Generator Set, Construction of sump tank, septic tank and soak Fit, Plant Room, Installation of GI perforated sheets over mezzanine floor pipes, Development of loading and unloading areas and Installation of Rigid polyurethane Foam (RPUF) panels ಗೆ ಈ ಹೆಚ್ಚುವರಿ ಕಾಮಗಾರಿಗಳು ಅಗತ್ಯವಿದೆಂದು ಅದಕ್ಕಾಗಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾವನೆ ಮಂಡಿಸಲಾಗಿತ್ತು.

ಕೃಷಿ ಆಯೋಗದ ನಿಯಮಗಳಿಗೆ ತಿದ್ದುಪಡಿ

ಕರ್ನಾಟಕ ಕೃಷಿ ಬೆಲೆ ಆಯೋಗದ ಕರ್ತವ್ಯಗಳು (Duties) ಷರತ್ತು ಮತ್ತು ನಿಬಂಧನೆಗಳನ್ನು (Terms of Reference) ಹೊರಡಿಸಿರುವ ತಿದ್ದುಪಡಿ ಆದೇಶ ಸಂಖ್ಯೆ: AGRI/45/ACT/2025, ದಿನಾಂಕ: 15.05.2025ಕ್ಕೆ ಘಟನೋತ್ತರ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಈ ಕೆಳಗಿನ ಕಾಯ್ದೆಗಳನ್ವಯ ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಮಾರ್ಗೋಪಾಯಗಳನ್ನು ರೂಪಿಸಿ, ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು. ಪ್ರಸ್ತುತ ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಅಪ್ರಸ್ತುತವಾಗಿದೆ. ಆದುದರಿಂದ ಕೃಷಿ ಬೆಲೆ ಆಯೋಗದ ಕರ್ತವ್ಯಗಳನ್ನು ಮಾರ್ಪಡಿಸಿ, ತಿದ್ದುಪಡಿ ಆದೇಶ ನೀಡುವುದಕ್ಕೆ ಪ್ರಸ್ತಾಪಿಸಲಾಗಿತ್ತು.

ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ
ಕುಟುಂಬ ಸದಸ್ಯರು ಎಂಬ ವ್ಯಾಖ್ಯಾನದಲ್ಲಿ ಸಹೋದರರು, ಸಹೋದರಿಯರು, ಮೊಮ್ಮಗ, ಅವಿವಾಹಿತ ಮೊಮ್ಮಗಳು, ಸೊಸೆ, ವಿಧವಾ ಮಗಳು ಮತ್ತು ವಿಧವಾ ಮೊಮ್ಮಗಳು ಎಂಬ ಪದಗಳ ನಂತರ ವಿವಾಹಿತ ಮಗಳೆಂಬ ಪದಗಳನ್ನು ಸೇರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ವೈದ್ಯಕೀಯ ಶಿಕ್ಷಣ ನಿರ್ದೇಶಕರ ಸೇವಾ ವಿಸ್ತರಣೆ
ಡಾ|| ಬಿ.ಎಲ್ ಸುಜಾತಾ ರಾಥೋಡ್, ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಇವರು ದಿನಾಂಕ: 30.06.2025 ರಲ್ಲಿ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ್ದು ಇವರನ್ನು ದಿನಾಂಕ: 01.07.2025 ರಿಂದ ಅನ್ವಯಿಸುವಂತೆ ಆರು ತಿಂಗಳ ಅವಧಿಗೆ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಮರು ನೇಮಕಾತಿ ಮಾಡಿ ದಿನಾಂಕ: 30.06.2025 ರಂದು ಅಧಿಸೂಚನೆ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡುವ ಬಗ್ಗೆ ಹಾಗೂ ಸದರಿ ಹುದ್ದೆಯ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸಲು ಅಧಿಕಾರ ಪ್ರತ್ಯಾಯೋಜಿಸುವ ಬಗ್ಗೆ” ಸಚಿವ ಸಂಪುಟವು ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಡಾ|| ಬಿ.ಎಲ್ ಸುಜಾತಾ ರಾಥೋಡ್ ಇವರನ್ನು ದಿನಾಂಕ: 01.07.2025 ರಿಂದ ಅನ್ವಯಿಸುವಂತೆ ಮುಂದಿನ 01 ವರ್ಷದ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಮರುನೇಮಕಾತಿ ಮಾಡಲು ಸಚಿವ ಸಂಪುಟ ಒಪ್ಪಿದೆ.
ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ
ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಹಾಗೂ ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ವಿವಿಧ ಕಲಂ ಗಳಿಗೆ ತಿದ್ದುಪಡಿ ಮಾಡಲು ಅನುಬಂಧದಲ್ಲಿರುವಂತೆ ತಿದ್ದುಪಡಿ ತರಲು; ಮತ್ತು ಸದರಿ ಕರಡು ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ

ಕರ್ನಾಟಕ ಮಹಾನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ: ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ

ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು 1977ರ ಅನುಸೂಚಿ 01ರ ಕ್ರಮ ಸಂಖ್ಯೆ: 1ರ ಅನ್ವಯ ಗ್ರೇಟರ್ ಬೆಂಗಳೂರು ಅಧಿನಿಯಮ, 2024ರ ಕಲಂ 8, 14 ಮತ್ತು 35ಕ್ಕೆ ತಿದ್ದುಪಡಿ ತರುವ ಉದ್ದೇಶದ ಅನುಬಂಧ-1 ರಲ್ಲಿನ ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025ಕ್ಕೆ ಸಚಿವ ಸಂಪುಟದ ಅನುಮೋದನೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ
ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಅಧಿನಿಯಮ 2013ಕ್ಕೆ ತಿದ್ದುಪಡಿ ಮಾಡಲು ಇದರೊಂದಿಗೆ ಲಗತ್ತಿಸಿರುವ, ಅನುಬಂಧದಲ್ಲಿರುವಂತೆ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ 2025ನ್ನು ವಿಧಾನ ಮಂಡಲದಲ್ಲಿ ಮಂಡಿಸಲು; ಸಚಿವ ಸಂಪುಟದ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಕರ್ನಾಟಕ ಕೃಷಿ ಉತ್ಪನ್ನ ಮಾರಾಟ ನಿಯಂತ್ರಣ ಅಭಿವೃದ್ಧಿ ಕಾಯ್ದೆ ತಿದ್ದುಪಡಿ (2020)
ಕೇಂದ್ರ ಸರ್ಕಾರದ ರೈತ ಉತ್ಪನ್ನ ಮತ್ತು ವಾಣಿಜ್ಯ ಉತ್ತೇಜನ ಹಾಗೂ ಸೌಲಭ್ಯ ಕಾಯ್ದೆ ಸುಗ್ರೀವಾಜ್ಞೆ (2020)
ರೈತರ ಸಾಮರ್ಥ್ಯಾಭಿವೃದ್ಧಿ ಮತ್ತು ರಕ್ಷಣೆ (ರೈತರ ಬೆಲೆ ಖಾತರಿ ಒಪ್ಪಂದ ಮತ್ತು ಕೃಷಿ ಸೇವೆಗಳು) ಕಾಯ್ದೆ ಸುಗ್ರೀವಾಜ್ಞೆ (2020)

ಹಿಂದುಳಿದ ಹಾಸ್ಟೇಲ್ಗಳಿಗೆ ಹಾಸಿಗೆ ಮತ್ತು ಕಾಟ್ಗಳ ಪೂರೈಕೆ
“ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಹೊಸದಾಗಿ ಮಂಜೂರು ಮಾಡಿರುವ ವಿದ್ಯಾರ್ಥಿ ನಿಲಯಗಳಲ್ಲಿನ ನಿಲಯಾರ್ಥಿಗಳಿಗೆ ಅಗತ್ಯತೆಯನುಸಾರ ಆಯವ್ಯಯದಲ್ಲಿ ಒದಗಿಸಿರುವ ರೂ.50.00 ಕೋಟಿಗಳ ಪೈಕಿ. ರೂ.40.00 ಕೋಟಿಗಳ ಅಂದಾಜು ವೆಚ್ಚದಲ್ಲಿ 15000 ಟೂ-ಟಯರ್ ಕಾಟ್ಗಳನ್ನು ಹಾಗೂ ರೂ.10.00 ಕೋಟಿಗಳ ಅಂದಾಜು ವೆಚ್ಚದಲ್ಲಿ 15000 ಕಾಯರ್ ಮ್ಯಾಟ್ರಿಸ್ಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಇ-ಪೋರ್ಟಲ್ ಮೂಲಕ ಸರಬರಾಜು ಪಡೆಯಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
2024-25ನೇ ಸಾಲಿನಲ್ಲಿ ಮಂಜೂರು ಮಾಡಲಾಗಿರುವ 150 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ. 2025-26ನೇ ಸಾಲಿನಲ್ಲಿ ಹೊಸದಾಗಿ ಮಂಜೂರಾದ 62 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಹಾಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಟೂ ಟಯರ್ ಕಾಟ್ ಹಾಗೂ ಬೆಡ್ಗಳನ್ನು ಒದಗಿಸುವುದು ಅಗತ್ಯವಾಗಿರುವುದರಿಂದ ಸದರಿ ಪ್ರಸ್ತಾವನೆಯನ್ನು ಪ್ರಸ್ತಾಪಿಸಲಾಗಿತ್ತು.

ಹಿಂದುಳಿದ ನಿರುದ್ಯೋಗಿಗಳಿಗೆ ವಿದ್ಯುತ್ ಚಾಲಿತ ಕಾರ್
ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ವಿದ್ಯುತ್ ಚಾಲಿತ ನಾಲ್ಕು ಚಕ್ರಗಳ ವಾಹನವನ್ನು ಖರೀದಿಸಿ ಆಹಾರ ಕಿಯೋಸ್ಕ್ ಪ್ರಾರಂಭಿಸಲು ವಾಹನ ಒಂದಕ್ಕೆ ಗರಿಷ್ಠ ರೂ.3.00 ಲಕ್ಷಗಳ ಸಹಾಯಧನದ ಮಿತಿಯಲ್ಲಿ ಒಂದೇ ಮಾದರಿಯ ಒಟ್ಟು 1103 ವಾಹನಗಳನ್ನು ಅಂದಾಜು ರೂ.33.09 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಅನುಮೋದನೆ; ಹಾಗೂ ಈ ವಿದ್ಯುತ್ ಚಾಲಿತ ನಾಲ್ಕು ಚಕ್ರಗಳ ವಾಹನಗಳನ್ನು ಮೇಲಿನ ಕಂಡಿಕೆ: 1.3 ರಲ್ಲಿ ನಿಗಮವಾರು ನಿಗದಿಪಡಿಸಿಕೊಂಡಿರುವ ಭೌತಿಕ ಹಾಗೂ ಆರ್ಥಿಕ ಗುರಿಗಳಿಗೆ 11 ನಿಗಮಗಳ ಪರವಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಇ-ಪೋರ್ಟಲ್ ಮೂಲಕ
ಹಿಂದುಳಿದ ವರ್ಗಗಳಿಗೆ ಸೇರಿದ ನಿರುದ್ಯೋಗಿಗಳಿಗೆ ವಿದ್ಯುತ್ ಚಾಲಿತ ನಾಲ್ಕು ಚಕ್ರ ವಾಹನ ಖರೀದಿಸಲು, ಆಹಾರ ಕಿಯೋಸ್ಕ್ ಪ್ರಾರಂಭಿಸಲು ಪ್ರತಿ ಫಲಾನುಭವಿಗೆ ಗರಿಷ್ಠ ರೂ.3.00 ಲಕ್ಷ ರೂಪಾಯಿ ಸಹಾಯಧನವನ್ನು ಎಲ್ಲಾ ನಿಗಮಗಳ ಪರವಾಗಿ ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಒಂದೇ ಮಾದರಿಯ ನಾಲ್ಕು ಚಕ್ರದ ವಿದ್ಯುತ್ ಚಾಲಿತ ವಾಹನವನ್ನು ಟೆಂಡರ್ ಆಹ್ವಾನಿಸಿ, ಫಲಾನುಭವಿಗಳಿಗೆ ಒದಗಿಸಲು ಪ್ರಸ್ತಾಪಿಸಲಾಗಿತ್ತು.

ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ
ಕುಟುಂಬ ಸದಸ್ಯರು ಎಂಬ ವ್ಯಾಖ್ಯಾನದಲ್ಲಿ ಸಹೋದರರು, ಸಹೋದರಿಯರು, ಮೊಮ್ಮಗ, ಅವಿವಾಹಿತ ಮೊಮ್ಮಗಳು, ಸೊಸೆ, ವಿಧವಾ ಮಗಳು ಮತ್ತು ವಿಧವಾ ಮೊಮ್ಮಗಳು ಎಂಬ ಪದಗಳ ನಂತರ ವಿವಾಹಿತ ಮಗಳೆಂಬ ಪದಗಳನ್ನು ಸೇರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ವೈದ್ಯಕೀಯ ಶಿಕ್ಷಣ ನಿರ್ದೇಶಕರ ಸೇವಾ ವಿಸ್ತರಣೆ
ಡಾ|| ಬಿ.ಎಲ್ ಸುಜಾತಾ ರಾಥೋಡ್, ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಇವರು ದಿನಾಂಕ: 30.06.2025 ರಲ್ಲಿ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ್ದು ಇವರನ್ನು ದಿನಾಂಕ: 01.07.2025 ರಿಂದ ಅನ್ವಯಿಸುವಂತೆ ಆರು ತಿಂಗಳ ಅವಧಿಗೆ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಮರು ನೇಮಕಾತಿ ಮಾಡಿ ದಿನಾಂಕ: 30.06.2025 ರಂದು ಅಧಿಸೂಚನೆ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡುವ ಬಗ್ಗೆ ಹಾಗೂ ಸದರಿ ಹುದ್ದೆಯ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸಲು ಅಧಿಕಾರ ಪ್ರತ್ಯಾಯೋಜಿಸುವ ಬಗ್ಗೆ” ಸಚಿವ ಸಂಪುಟವು ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಡಾ|| ಬಿ.ಎಲ್ ಸುಜಾತಾ ರಾಥೋಡ್ ಇವರನ್ನು ದಿನಾಂಕ: 01.07.2025 ರಿಂದ ಅನ್ವಯಿಸುವಂತೆ ಮುಂದಿನ 01 ವರ್ಷದ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಮರುನೇಮಕಾತಿ ಮಾಡಲು ಸಚಿವ ಸಂಪುಟ ಒಪ್ಪಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read