BIG NEWS : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ |Cabinet Meeting

ಬೆಂಗಳೂರು : CM ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಕಾರವಾರ ಕ್ಯಾನ್ಸರ್ ಕೇರ್ ಘಟಕದ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ ಉಪಕರಣಗಳಿಗೆ ತಗಲುವ ₹18.25 ಕೋಟಿ ಮೊತ್ತವನ್ನು ಸರ್ಕಾರದ ವತಿಯಿ೦ದ ಭರಿಸಲು ಮತ್ತು ₹13.38 ಕೋಟಿ ಅನುದಾನವನ್ನು ಸಂಸ್ಥೆಯ ಆಂತರಿಕ ಸಂಪನ್ಮೂಲದಿಂದ ಭರಿಸಲು ತೀರ್ಮಾನ

ಕರ್ನಾಟಕ ಸ್ಟಾರ್ಟ್ ಅಪ್ ಪಾಲಿಸಿ 2022-27ರ ಅಡಿಯಲ್ಲಿ ಐದು ವರ್ಷಗಳ ಅವಧಿಗೆ ₹80 ಕೋಟಿ ವೆಚ್ಚದಲ್ಲಿ 8 ಟೆಕ್ನಾಲಜಿ ಬ್ಯುಸಿನೆಸ್ ಇನ್ಕ್ಯೂಬೇಟರ್ಸ್ (TBIs) 2.0 ಗಳನ್ನು ಸ್ಥಾಪಿಸಲು ನಿರ್ಧಾರ.

2025 – 26ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ 241 ವಿವಿಧ ಮಾದರಿಯ ವಾಹನಗಳನ್ನು ₹34.95 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ

₹69.13 ಕೋಟಿ ವೆಚ್ಚದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಡಿ ಇನ್-ಹೌಸ್ ತಾಂತ್ರಿಕ ಅಭಿವೃದ್ಧಿ ವಿಭಾಗ ‘ಕಾವೇರಿ ಐಟಿ ಸೆಲ್’ ಸ್ಥಾಪನೆಗೆ ತೀರ್ಮಾನ

ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳನ್ನು ನಿರ್ಮಾಣ ಮಾಡುವ ಕಾರ್ಯವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲು ತೀರ್ಮಾನ

ರಾಜ್ಯದ ನಾಲ್ಕು ಬ೦ದರುಗಳಾದ ಕಾರವಾರ, ಹಳೇ ಮ೦ಗಳೂರು (ಬೇ೦ಗ್ರೆ ಬದಿ), ಹಳೇ ಮ೦ಗಳೂರು (ನಗರ ಬದಿಯ) ಮತ್ತು ಮಲ್ಪೆಯ ಬರ್ತ್ಗಳನ್ನು ಸಾರ್ವಜನಿಕ – ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ
ರಿಪೇರಿ – ಕಾರ್ಯಾಚರಣೆ – ನಿರ್ವಹಣೆ – ವರ್ಗಾವಣೆ (ROMT) ಆಧಾರದಲ್ಲಿ ಅಭಿವೃದ್ಧಿಪಡಿಸಲು ನಿರ್ಧಾರ
ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕಾಲುವೆ ಫಾರ್ಮ್ನಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಪ್ರಾಥಮಿಕ ಹಂತದಲ್ಲಿ ₹23.25 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ದುರಸ್ತಿ ಮತ್ತು ನವೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ₹10.55 ಕೋಟಿಗಳ ಮೊತ್ತದಲ್ಲಿ ಕೈಗೊಳ್ಳುವ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಡಾ೦ಬರೀಕರಣ ಕಾಮಗಾರಿಗಳನ್ನು ₹12.41 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳುವ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.

ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕೇರ್ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಮೊದಲನೇ ಹಂತದ ಉಪಕರಣಗಳು, ಸಿಎಸ್ಎಸ್ಡಿ ಉಪಕರಣಗಳು ಮತ್ತು ಪೀಠೋಪಕರಣಗಳನ್ನು ₹50 ಕೋಟಿಗಳ ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.

https://twitter.com/KarnatakaVarthe/status/1983899335562559503/photo/3

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read