HomeBusinessಇಂದಿನಿಂದಲೇ ವಾಹನ ಸವಾರರ ಜೇಬಿಗೆ ಕತ್ತರಿ: ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ

ಇಂದಿನಿಂದಲೇ ವಾಹನ ಸವಾರರ ಜೇಬಿಗೆ ಕತ್ತರಿ: ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ

ರಾಮನಗರ: ಇಂದಿನಿಂದಲೇ ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಿಸಲಾಗುತ್ತದೆ. ವಿರೋಧದ ನಡುವೆಯೂ ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಲಿದೆ. ನಿಡಘಟ್ಟವರೆಗಿನ 56 ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಕಾರ್ ಗಳಿಗೆ 135 ರೂ.ಶುಲ್ಕ ನಿಗದಿಪಡಿಸಲಾಗಿದೆ.

ಲಘುವಾಹನ, ಮಿನಿ ಬಸ್ ಗಳಿಗೆ 280 ರೂ., ಬಸ್, ಟ್ರಕ್ ಗಳಿಗೆ 460 ರೂ., 3 ಆಕ್ಸೆಲ್ ವಾಹನಗಳಿಗೆ 500 ರೂ., ಭಾರಿ ನಿರ್ಮಾಣ ವಾಹನಗಳಿಗೆ 720 ರೂ. ಹಾಗೂ ಅತಿ ಗಾತ್ರದ ವಾಹನಗಳಿಗೆ 880 ರೂ. ಶುಲ್ಕ ನಿಗದಿಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾ. 14 ರ ಬೆಳಗ್ಗೆ 8 ಗಂಟೆಯಿಂದ ಟೋಲ್ ಸಂಗ್ರಹ ಆರಂಭವಾಗಲಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ದಶಪಥ ಹೆದ್ದಾರಿ ಉದ್ಘಾಟಿಸಿದ್ದರು. ಮಾರ್ಚ್ 1 ರಿಂದಲೇ ಟೋಲ್ ಸಂಗ್ರಹಕ್ಕೆ ನಿರ್ಧರಿಸಲಾಗಿತ್ತು. ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹವನ್ನು ಮುಂದೂಡಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular