ವಿಷ ಬೀಜ ಬಿತ್ತುವುದೇ ಸಿದ್ಧರಾಮಯ್ಯ ಗ್ಯಾರಂಟಿ: ಹಿಜಾಬ್ ನಿಷೇಧ ಆದೇಶ ವಾಪಸ್ ಹೇಳಿಕೆಗೆ ಬಿಜೆಪಿ ಆಕ್ರೋಶ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಸಿಎಂ ಸಿದ್ಧರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ಧರಾಮಯ್ಯ ಅವರ ಗ್ಯಾರಂಟಿ. ಶಾಲೆ -ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಮುಖ್ಯಮಂತ್ರಿಗಳು ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಟೀಕಿಸಿದೆ.

ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಲಾಗಿದೆ.

https://twitter.com/BJP4Karnataka/status/1738217811720421715

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read