HomeKarnatakaBIG BREAKING NEWS: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧ ಆದೇಶ ವಾಪಸ್: ಸಿಎಂ...

BIG BREAKING NEWS: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧ ಆದೇಶ ವಾಪಸ್: ಸಿಎಂ ಸಿದ್ಧರಾಮಯ್ಯ ಘೋಷಣೆ

ಮೈಸೂರು: ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ, ಪ್ರಧಾನಿ ಮೋದಿ ಅವರ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಜಾತಿ ಆಧಾರದ ಮೇಲೆ ಜನರನ್ನು, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ನಿಷೇಧಿಸಲಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ನಿಷೇಧ ಆದೇಶ ವಾಪಸ್ ಪಡೆದುಕೊಂಡಿದೆ.

ಮೈಸೂರಿನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿ, ಹಿಜಾಬ್ ನಿಷೇಧ ಆದೇಶ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಉಡುಪು ಧರಿಸುವುದು ಅವರವರ ಇಷ್ಟ. ಬಟ್ಟೆ ತೊಡುವುದು, ಊಟ ಮಾಡುವುದು ನಿಮಗೆ ಸೇರಿದ್ದು. ಅದಕ್ಕೆ ನಾನು ಏಕೆ ಅಡ್ಡಿಪಡಿಸಲಿ? ಬಟ್ಟೆ, ಜಾತಿ ಆಧಾರದ ಮೇಲೆ ಬಿಜೆಪಿ ಜನರನ್ನು ವಿಭಜಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಸುಳ್ಳು ಹಾಗೂ ಮೋಸ ಮಾಡುವವರ ಜೊತೆ ಯಾರು ಇರಬೇಡಿ. ವೋಟಿಗಾಗಿ ರಾಜಕೀಯ ಮಾಡಬಾರದು. ನಾವು ಸಮಾಜದಲ್ಲಿರುವ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular