HomeKarnatakaBIG NEWS: ಹಿಜಾಬ್ ನಿಷೇಧ ಆದೇಶ ವಾಪಾಸ್; ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ;...

BIG NEWS: ಹಿಜಾಬ್ ನಿಷೇಧ ಆದೇಶ ವಾಪಾಸ್; ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ ಎಂದು ಆರೋಪಿಸಿದ್ದಾರೆ.

ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳುತ್ತಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಯಾರಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪುಹಾಕದ ಹೈಕಮಾಂಡ್ ಇವೆಲ್ಲದರ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ ಹಿಜಾಬ್ ವಿಷಯ ಪ್ರಸ್ತಾಪಿಸಿ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular