ರಾಜ್ಯದ ಎಲ್ಲಾ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನಾ ವೇಳೆ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದ ಹಿಮಾಚಲ ಪ್ರದೇಶ ಸರ್ಕಾರ

ಶಿಮ್ಲಾ: ಹಿಮಾಚಲ ಪ್ರದೇಶದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ ಸಮಯದಲ್ಲಿ ದಿನಪತ್ರಿಕೆ ಓದುವುದನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ.

ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ನಿರ್ದೇಶನದ ಮೇರೆಗೆ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಎಲ್ಲಾ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ಹಿಂದಿ ಪತ್ರಿಕೆಗಳ ನಿಯಮಿತ ಲಭ್ಯತೆ ಖಚಿತಪಡಿಸಿಕೊಳ್ಳಲು ಶಾಲೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.

ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ವಯಸ್ಸಿಗೆ ಸೂಕ್ತವಾದ ಸುದ್ದಿಗಳನ್ನು ಆಯ್ಕೆ ಮಾಡುವಂತೆ ತಿಳಿಸಲಾಗಿದೆ.

ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಇತ್ತೀಚೆಗೆ ಕುಲು ಜಿಲ್ಲೆಯ ಬಾಗಾ ಸರಾಹತ್ ನಲ್ಲಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಗೆ ಭೇಟಿ ನೀಡಿದ್ದ ವೇಳೆ 10 ನೇ ತರಗತಿ ವಿದ್ಯಾರ್ಥಿಗಳಿಗೆ ಭಾರತದ ರಾಷ್ಟ್ರಪತಿ ಹೆಸರು ಅಥವಾ ದೇಶದ ರಾಜಧಾನಿಯಂತಹ ಸಾಮಾನ್ಯ ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದಿರುವುದನ್ನು ಗಮನಿಸಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ದಿನಪತ್ರಿಕೆ ಓದಿಸುವ ಅಭ್ಯಾಸ ಮಾಡಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಎಲ್ಲಾ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read