ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ; ಪೋಷಕರಿಂದ ಶಿಕ್ಷಕನಿಗೆ ಗೂಸಾ | Viral Video

ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಹಿಮಾಚಲಪ್ರದೇಶದ ಹಮೀರ್‌ಪುರದಲ್ಲಿ ಸ್ಥಳೀಯ ಶಾಲಾ ಶಿಕ್ಷಕನನ್ನು ವಿದ್ಯಾರ್ಥಿಗಳು ಮತ್ತು ಕುಟುಂಬದವರು ಥಳಿಸಿದ್ದಾರೆ.

ಸ್ಥಳೀಯ ಶಾಲೆಯಲ್ಲಿ ಶಿಕ್ಷಕನಾಗಿರುವ ಈತ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಎನ್ನಲಾಗಿದ್ದು, ವಿಷಯ ತಿಳಿದ ಪೋಷಕರು ಸಾರ್ವಜನಿಕವಾಗಿ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಿಕ್ಷಕನಿಗೆ ಚಪ್ಪಲಿಯಿಂದ ಥಳಿಸಿದ್ದು, ವರದಿಗಳ ಪ್ರಕಾರ ಶಿಕ್ಷಕ ಹಲವಾರು ವಿದ್ಯಾರ್ಥಿನಿಯರಿಗೆ ಪದೇ ಪದೇ ಅಶ್ಲೀಲ ಮತ್ತು ಅಸಭ್ಯ ಸಂದೇಶಗಳನ್ನು ಕಳುಹಿಸುವ ಮೂಲಕ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದೆ. ಕಿರುಕುಳ ಸಹಿಸಲಾಗದೆ ವಿದ್ಯಾರ್ಥಿನಿಯರು ಪೋಷಕರು ತಿಳಿಸಿದ್ದು, ಶಾಲೆಗೆ ಆಗಮಿಸಿದ ಅವರು ಶಿಕ್ಷಕನಿಗೆ ಚಪ್ಪಲಿಯಿಂದ ಥಳಿಸಿದ್ದಾರೆ.

ಶಿಕ್ಷಕನಿಗೆ ಇಬ್ಬರು ಪುರುಷರು ಮತ್ತು ವಿದ್ಯಾರ್ಥಿನಿಯೊಬ್ಬರು ಚಪ್ಪಲಿಯಿಂದ ಹೊಡೆದು ಕಪಾಳಮೋಕ್ಷ ಮಾಡಿರುವುದು ವಿಡಿಯೋ ದೃಶ್ಯಾವಳಿಯಲ್ಲಿದೆ. ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ವಿದ್ಯಾರ್ಥಿನಿಯ ಕುಟುಂಬದ ಸದಸ್ಯರು ಅವನಿಗೆ ಕಪಾಳಮೋಕ್ಷ ಮಾಡುವುದನ್ನು ಮುಂದುವರೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read