ಭೀಕರ ಬಸ್ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಭೀಕರ ಬಸ್ ಅಪಘಾತದಲ್ಲಿ ಸ್ಥಳದಲ್ಲೇ ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ನಡೆದಿದೆ.

ಶಿಮ್ಲಾದ ಜುಬ್ಬಲ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ರಸ್ತೆಯಲ್ಲಿಯೇ ಉರುಳಿಬಿದ್ದಿದೆ. ಘಟನೆಯಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಹಾಗೂ ನೇಪಾಳಿ ಪ್ರಜೆ ನಾಲ್ವರು ಸಾವನ್ನಪ್ಪಿದ್ದಾರೆ.

ಅಪಘಾತದ ವೇಳೆ ಬಸ್ ನಲ್ಲಿ 7 ಪ್ರಯಾಣಿಕರಿದ್ದರು. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read