HomeLatest NewsBIG NEWS: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 7ಕ್ಕೆ ಏರಿಕೆ; ಹಲವರು ನಾಪತ್ತೆ

BIG NEWS: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 7ಕ್ಕೆ ಏರಿಕೆ; ಹಲವರು ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಹಲವರು ನಾಪತ್ತೆಯಾಗಿದ್ದಾರೆ.

ಹಿಮಾಚಲ ಪ್ರದೇಶದ 5 ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದಾದಿ ಪ್ರವ ಸಂಭವಿಸಿದ್ದು, ನೀರಿನ ರಭಸಕ್ಕೆ ಜನರು ಕೊಚ್ಚಿ ಜೋಗಿದ್ದಾರೆ. ಈವರೆಗೆ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರಾ, ಧರ್ಮಶಾಲಾ, ಕುಲ್ಲು, ಖಾಡ್ ಸೇರಿದಂತೆ ಹಲವೆಡೆಗಳಲ್ಲಿ ಭಾರಿ ಪ್ರವಾಹವುಂಟಾಗಿದ್ದು, ವಾಹನಗಳು, ಕಟ್ಟಡಗಳು, ಜನರು ತರಗೆಲೆಗಳಂತೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಲವರು ನಾಪತ್ತೆಯಾಗಿದ್ದು, ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯುತ್ ಸ್ಥಾವರದ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಪ್ರವಾಹದ ಪಾಲಾಗಿದ್ದು, ಕಾರ್ಮಿಕರಿಗಾಗಿ ಶೋಧಕಾರ್ಯ ಮುಂದುವರೆದಿದೆ, ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ನ 50 ಜನರು ಸ್ಥಳದಲ್ಲೇ ಬೀಡಿ ಬಿಟ್ಟು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕುಲಿವಿನ ಜಿವನಾಲಾದಲ್ಲಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಜೂನ್ 28ರಿಂದ ಜುಲೈ 1ರವರೆಗೂ ಭಾರಿ ಮಳೆಯಾಗಲಿದೆ ಈ ಹಿನ್ನೆಲೆಯಲ್ಲಿ ಅಲರ್ಟ್ ಘೋಷಿಸಿಸಲಾಗಿದೆ. ಈಗಾಗಲೇ ಪಾಂಡೋಹ್ ನಲ್ಲಿ 139.0 ಮೀ.ಮೀ, ಜೋಗಿಂದರ್ ನಗರದಲ್ಲಿ 73.0 ಮೀ.ಮೀ, ಶಿಲಾರುವಿನಲ್ಲಿ 54.0 ಮೀ.ಮಿ ಕಟೋಲಾದಲ್ಲಿ 45.2 ಮೀ.ಮೀ ಮಳೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular