ನಿಷೇಧದ ನಡುವೆಯೂ ಪ್ರವಾಸಿಗರನ್ನು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಕರೆದೊಯ್ದ ಬಂಡೀಪುರ ಅರಣ್ಯ ಸಿಬ್ಬಂದಿ

ಚಾಮರಾಜನಗರ: ಕೇರಳ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಿ ವಿವಾದಕ್ಕೀಡಾಗಿದ್ದ ಬಂಡೀಪುರ ಅರಣ್ಯ ಸಿಬ್ಬಮ್ದಿಗಳು ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಿ ಬಂಡೀಪುರ ಅರಣ್ಯ ಸಿಬ್ಬಂದಿ ವಿವಾದ ಸೃಷ್ಟಿಸಿದ್ದರು. ಇದೀಗ ನಿಷೇಧದ ಬಳಿಕವೂ ಕೆಲವರನ್ನು ಬೆಟ್ಟಕ್ಕೆ ಕರೆದೊಯ್ದಿದ್ದಾರೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಲು ಸಂಜೆ 4:30ರ ಬಳಿಕ ನಿಷೇಧವಿದೆ. ಆದರೆ 4:30ರ ಬಳಿಕವೂ ಅರಣ್ಯ ಸಿಬ್ಬಂದಿ ಅಧಿಕ ಹಣದ ಆಸೆಗಾಗಿ ತಮ್ಮ ವಾಹನದಲ್ಲೇ ಕೆಲವರನ್ನು ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದಾರೆ. ಅರಣ್ಯ ಸಿಬ್ಬಂದಿಯ ಈ ನಡೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read