ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧ; ಒಂದೇ ದಿನದಲ್ಲಿ ಆದೇಶ ವಾಪಾಸ್

ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಒಂದೇ ದಿನದಲ್ಲಿ ವಾಪಾಸ್ ಪಡೆಯಲಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತಹಶೀಲ್ದಾರ್ ಬಸ್ ಸಂಚಾರ ನಿಷೇಧ ಆದೇಶ ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಡೀಪುರ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಯಥಾಸ್ಥಿತಿಯಂತೆ ಮುಂದುವರೆಯಲಿದೆ.

ವನ್ಯಜೀವಿಗೆ ತೊಂದರೆ, ಪ್ರವಾಸಿಗರಿಗೆ ಅಪಾಯದ ಕಾರಣ ನೀಡಿ ಮಧ್ಯಾಹ್ನ 3ಗಂಟೆ ಬಳಿಕ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು. ಇದಕ್ಕೆ ಪ್ರವಾಸಿಗರು, ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಸಂಚಾರ ನಿಷೇಧವನ್ನು ತಹಶೀಲ್ದಾರ ರಮೇಶ್ ಬಾಬು ವಾಪಾಸ್ ಪಡೆದಿದ್ದು, ಸಂಜೆ 4 ಗಂಟೆಯವರೆಗೆ ಎಂದಿನಂತೆ ಬಸ್ ಸಂಚರಿಸಲಿದೆ.

ಇನ್ನು ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತ ಡ್ರೋಣ್, ಕ್ಯಾಮರಾ ಚಿತ್ರೀಕರಣಕ್ಕೆ ನಿಷೇಧ ಹೇರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read