HomeKarnatakaಹಿಂದಿ ಮಾತನಾಡಲು ಬರಲ್ಲ ಎಂದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ

ಹಿಂದಿ ಮಾತನಾಡಲು ಬರಲ್ಲ ಎಂದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಿಂದಿ ಮಾತನಾಡಲು ಬರಲ್ಲ ಎಂದಿದ್ದಕ್ಕೆ ಫುಡ್ ಡೆಲಿವರಿ ಬಾಯ್ ಮೇಲೆ ಹಿಗಾ ಮುಗ್ಗಾ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿಂದಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಫುಡ್ ಡೆಲಿವರಿ ಬಾಯ್ ಮೇಲೆ ಅನ್ಯ ರಾಜ್ಯದ ಕೆಲವರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಓರ್ವ ಯುವತಿ ಹಾಗೂ ಇಬ್ಬರು ಯುವಕರು ಸೇರಿ ನಡುರಸ್ತೆಯಲ್ಲೇ ಡೆಲಿವರಿ ಬಾಯ್ ಮುಖಕ್ಕೆ ಪಂಚ್ ಮಾಡಿದ್ದಾರೆ. ಈ ಅಮಾನವೀಯ ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular