ಮಂಗಳೂರು : ಮಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತ ಸುಹಾಸ್ ನನ್ನು ಕೊಲೆ ಮಾಡಲಾಗಿದ್ದು, ಮಂಗಳೂರು ಬೆಚ್ಚಿ ಬಿದ್ದಿದೆ. ಈ ಹಿನ್ನೆಲೆ ಮೇ 5 ರವರೆಗೂ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರು ಪತ್ತೆಯಾಗಿದೆ. ಹಾಗೂ ಕಾರಿನೊಳಗೆ 2 ತಲ್ವಾರ್ ಪತ್ತೆಯಾಗಿದೆ. ಬಜ್ಪೆ ಪೊಲೀಸರು ಕಾರನ್ನು ವಶಕ್ಕೆ ಪಡೆದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿಯ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.ಮಂಗಳೂರಿನ ಬಜಪೆ, ಕಿನ್ನಿಪದವು ಸಮೀಪ ಘಟನೆ ನಡೆದಿದೆ. 2022ರ ಜುಲೈ 28 ರಂದು ಫಾಜಿಲ್ ಕೊಲೆ ನಡೆದಿತ್ತು. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದ. ಸುಹಾಸ್ ಶೆಟ್ಟಿ. ಹಲವಾರು ಕೊಲೆ, ಕೊಲೆ ಯತ್ನ ಕೇಸ್ ನ ಆರೋಪಿಯಾಗಿದ್ದ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.