HomeLatest NewsBREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ವಶಕ್ಕೆ

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ವಶಕ್ಕೆ

ಮಂಗಳೂರು: ರೌಡಿಶೀಟರ್, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆಯಲ್ಲಿ ಇಂದು ಮಂಗಳೂರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಪೊಲೀಸರೊಂದಿಗೆ ಸಭೆ ನಡೆಸಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಪರಮೇಶ್ವರ್ ಸಭೆ ನಡೆಸಲಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಂಟಿ ಸಭೆ ನಡೆಸಲಿದ್ದಾರೆ. ಎಡಿಜಿಪಿ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು, ಎಸ್ಪಿ ಸೇರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular