ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬಜ್ಪೆಯ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ(ಪಿಎಫ್ಐ) ಮಾಜಿ ಸದಸ್ಯ ಸೇರಿದಂತೆ 11 ಜನರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಆರೋಪ ಪಟ್ಟಿ ಸಲ್ಲಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗೆಯಲ್ಲಿ ಸುಹಾಷ್ ಶೆಟ್ಟಿ ಸಕ್ರಿಯವಾಗಿದ್ದ. ಈ ಚಟುವಟಿಕೆಗೆ ಕಡಿವಾಣ ಹಾಕಲು ಆರೋಪಿಗಳು ಸಂಚು ರೂಪಿಸಿ ಕಳೆದ ಮೇ 1ರಂದು ಸುಹಾಸ್ ಶೆಟ್ಟಿ ಮೇಲೆ ಭೀಕರವಾಗಿ ದಾಳಿ ಮಾಡಿ ಹತ್ಯೆ ಮಾಡಿದ್ದರು. ಈ ಕೃತ್ಯದ ಮೂಲಕ ಸಮಾಜದಲ್ಲಿ ಭೀತಿ ಸೃಷ್ಟಿಸಿ ಗಮನ ಸೆಳೆಯುವ ಉದ್ದೇಶದಿಂದ ಹತ್ಯೆ ಮಾಡಿದ್ದಾರೆ ಎಂದು ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

 
			 
		 
		 
		 
		 Loading ...
 Loading ... 
		 
		 
		