Aroodha Bharathi Swamiji : ಹಿಂದೂ ಹುಡುಗರಿಗೂ ಗಂಡಸ್ತನವಿದೆ, ಲವ್ ಮಾಡಿ ಮತಾಂತರ ಮಾಡ್ತಾರೆ : ಆರೂಢ ಭಾರತಿ ಶ್ರೀ ಎಚ್ಚರಿಕೆ

ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ಸಿದ್ದರೂಢ ಇಂಟರ್ನ್ಯಾಷನಲ್ ಗುರುಕುಲಮ್ನ ಆರೂಢ ಭಾರತೀ ಸ್ವಾಮೀಜಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಮುಸ್ಲಿಮರಿಗಷ್ಟೇ ಗಂಡಸ್ತನವಿಲ್ಲ, ಹೆಚ್ಚಾಗಿ ಮೀಸೆ ಇರೋದಲ್ಲ.   ಹಿಂದೂ ಹುಡುಗರಿಗೂ ಗಂಡಸ್ತನವಿದೆ. ಮುಸ್ಲಿಂ ಹುಡುಗಿಯರನ್ನು ಲವ್ ಮಾಡಿ ಮಾಡಿ ಮತಾಂತರ ಮಾಡಬೇಕಾಗುತ್ತದೆ. ಅಲ್ಲದೇ ಮುಸ್ಲಿಮರು ಈ ವಿಚಾರವಾಗಿ ಹುಷಾರಾಗಿ ಇರಬೇಕು ಎಂದು ಎಚ್ಚರಿಸಿದ್ದಾರೆ. ಎಂದು ರಾಮೋಹಳ್ಳಿಯ ಆರೂಢ ಭಾರತೀ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಸ್ವಾತಂತ್ರಾನಂತರ ಹಿಂದೂ, ಜೈನ, ಸಿಖ್, ಬೌದ್ದರ ಜನಸಂಖ್ಯೆ ಇಳಿಕೆಯಾಗುತ್ತಿದ್ದು, ಮುಸ್ಲಿಂ, ಕ್ರೈಸ್ತರ ಜನಸಂಖ್ಯೆ ಹೆಚ್ಚಾಗುತ್ತಿದೆ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಬಲವಂತ ಮಾಡಿ ಮತಾಂತರ ಮಾಡಲಾಗುತ್ತಿದೆ ಎಂದರು. ಸ್ವಪ್ರೇರಣೆಯಿಂದ ಮತಾಂತರ ಆದರೆ ತಪ್ಪಿಲ್ಲ. ಆದರೆ ಬಲವಂತವಾಗಿ ಮಾಡುವುದು ಅಪರಾಧ ಎಂದು ಸ್ವಾಮೀಜಿ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read