HomeKarnatakaಮುಸ್ಲಿಂ ಯುವಕರಿಂದ ಮಾದರಿ ಕಾರ್ಯ: ಮೃತ ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರ

ಮುಸ್ಲಿಂ ಯುವಕರಿಂದ ಮಾದರಿ ಕಾರ್ಯ: ಮೃತ ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ಮೃತ ಹಿಂದೂ ವ್ಯಕ್ತಿಯ ಶವಸಂಸ್ಕಾರಕ್ಕೆ ಮುಸ್ಲಿಂ ಯುವಕರು ಸಹಕಾರ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಸುಮಾರು 20 ವರ್ಷಗಳ ಹಿಂದೆ ಮನೆ ಬಿಟ್ಟು ಬಂದಿದ್ದ ರಾಹುಲ್ ಎಸ್. ನಂದಕುಮಾರ್ ಅವರು ಚಕ್ಕಮಕ್ಕಿ ಗ್ರಾಮದ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರು ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುಟುಂಬದ ಯಾರ ಸಂಪರ್ಕವೂ ರಾಹುಲ್ ಅವರಿಗೆ ಇರಲಿಲ್ಲ. ಅವರ ಮೊಬೈಲ್ ಪರಿಶೀಲಿಸಿದ ಯುವಕರು ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಈ ವೇಳೆ ಮೃತ ರಾಹುಲ್ ಗೆ ಇಬ್ಬರು ಪತ್ನಿಯರಿದ್ದು, ಮೊದಲ ಪತ್ನಿ ನಿಧನರಾಗಿರುವುದು ಗೊತ್ತಾಗಿದೆ. ಎರಡನೇ ಪತ್ನಿಗೆ ಕರೆ ಮಾಡಿ ವಿಷಯ ತಿಳಿಸಿದರೂ ಅವರ್ಯಾರು ಅಂತ್ಯ ಸಂಸ್ಕಾರಕ್ಕೆ ಬಂದಿಲ್ಲ. ಕೊನೆಗೆ ಮೊದಲ ಪತ್ನಿಯ ಮಗ ಆಳ್ವಾಸ್ ಕಾಲೇಜಿನಲ್ಲಿ ಓದುತ್ತಿರುವುದನ್ನು ಖಚಿತಪಡಿಸಿಕೊಂಡ ಯುವಕರು ಆತನನ್ನು ಕರೆತಂದು ತಂದೆಯ ಅಂತ್ಯ ಸಂಸ್ಕಾರ ಮಾಡಿಸಿದ್ದಾರೆ. ತಾವೇ ಮೃತದೇಹಕ್ಕೆ ಹೆಗಲು ಕೊಟ್ಟು ಸಹಕಾರ ನೀಡುವ ಮೂಲಕ ಮಾದರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular