BREAKING NEWS: ಹಿಂದೂ ಧರ್ಮಕ್ಕೆ ಅವಹೇಳನ ಪ್ರಕರಣ; ಶಿಕ್ಷಕಿ ಸಸ್ಪೆಂಡ್

ಮಂಗಳೂರು: ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

7ನೇ ತರಗತಿಯ ಶಿಕ್ಷಕಿ ಸಿಸ್ಟರ್ ಪ್ರಭಾ ಅಮಾನತುಗೊಂಡವರು. ಮಂಗಳೂರಿನ ಸಂತ ಜರೊಸಾ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆ ಶಿಕ್ಷಕಿ ಪ್ರಭಾ ಶಾಲೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಪೋಷಕರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಸಂತ ಜರೊಸಾ ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು. ಆದರೆ ಎರಡು ದಿನವಾದರೂ ಶಾಲಾ ಆಡಳಿತ ಮಂಡಳಿ ಶಿಕ್ಷಕಿ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ.

ಇದರಿಂದ ರೊಚ್ಚಿಗೆದ್ದ ಪೋಷಕರು ಇಂದು ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಶಾಲೆಗೆ ಮುತ್ತಿಗೆ ಹಾಕಿ ಶಿಕ್ಷಕಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಶಾಲಾ ಆಡಳಿತ ಮಂಡಳಿ ಶಿಕ್ಷಕಿ ಪ್ರಭಾ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read