HomeKarnatakaಹಿಂದೂ ಧರ್ಮ ಯಾವಾಗ ಹುಟ್ಟಿತು...? ಹುಟ್ಟಿಸಿದವರು ಯಾರು...?: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದದ...

ಹಿಂದೂ ಧರ್ಮ ಯಾವಾಗ ಹುಟ್ಟಿತು…? ಹುಟ್ಟಿಸಿದವರು ಯಾರು…?: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಹೊತ್ತಲ್ಲೇ ಪರಮೇಶ್ವರ್ ಹೇಳಿಕೆ

ತುಮಕೂರು: ಸನಾತನ ಧರ್ಮದ ಕುರಿತಾಗಿ ತಮಿಳುನಾಡು ಸಚಿವ ಉದಯಗಿರಿ ಸ್ಟಾಲಿನ್ ನೀಡಿದ ಹೇಳಿಕೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಹೊತ್ತಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹಿಂದೂ ಧರ್ಮದ ಕುರಿತಾಗಿ ಹೇಳಿಕೆ ನೀಡಿದ್ದಾರೆ.

ಹಿಂದೂ ಧರ್ಮ ಯಾವಾಗ ಹುಟ್ಟಿದ್ದು? ಯಾರು ಹುಟ್ಟಿಸಿದರು ಎಂದು ಸಚಿವ ಪರಮೇಶ್ವರ್ ಪ್ರಶ್ನಿಸಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮವನ್ನು ಯಾರು ಹುಟ್ಟಿಸಿದರು? ಯಾವಾಗ ಹುಟ್ಟಿದ್ದು ಎಂಬ ಬಗ್ಗೆ ಇನ್ನೂ ಪ್ರಶ್ನಾರ್ಥಕ ಚಿಹ್ನೆ ಇದೆ. ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ದೇಶದಲ್ಲಿ ಬೌದ್ಧ ಧರ್ಮ ಹಾಗೂ ಜೈನ ಧರ್ಮ ಹುಟ್ಟಿವೆ. ಹೊರಗಡೆಯಿಂದ ಇಸ್ಲಾಂ ಧರ್ಮ ಹಾಗೂ ಕ್ರೈಸ್ತ ಧರ್ಮ ಬಂದಿವೆ. ಮನುಕುಲಕ್ಕೆ ಒಳ್ಳೆಯದಾಗಬೇಕೆಂಬುದೇ ಎಲ್ಲಾ ಧರ್ಮಗಳ ಸಾರವಾಗಿದೆ ಎಂದು ಪರಮೇಶ್ವರ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular