HomeKarnatakaBIG NEWS: ಹಿಂದೂ ದೇವರಿಗೆ ಅವಮಾನ ಪ್ರಕರಣ; ಆರೋಪಿ ಅರೆಸ್ಟ್

BIG NEWS: ಹಿಂದೂ ದೇವರಿಗೆ ಅವಮಾನ ಪ್ರಕರಣ; ಆರೋಪಿ ಅರೆಸ್ಟ್

ಕಾರವಾರ: ಹಿಂದೂ ದೇವತೆಗಳನ್ನು ನಿಂದಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ಬಂಧಿತ ಆರೋಪಿ. ಹಿಂದೂ ದೆವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಜನರೇ ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಕಾರವಾರ ಪೊಲೀಸ್ ಠಾಣೆ ಎದುರು ನೂರಾರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಯನ್ನು ಬಂಧಿಸುವಂತೆ ಪ್ರತಿಭಟಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಎಲಿಷಾ ಎಲಕಪಾಟಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular