HomeKarnatakaBIG NEWS : 'ಹಿಂದೂ' ಎನ್ನುವುದು ಒಂದು ಧರ್ಮವೇ ಅಲ್ಲ : ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ...

BIG NEWS : ‘ಹಿಂದೂ’ ಎನ್ನುವುದು ಒಂದು ಧರ್ಮವೇ ಅಲ್ಲ : ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ ಹೇಳಿಕೆ

ಧಾರವಾಡ : ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ ಹೇಳಿಕೆ ನೀಡಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಗದಗ ತೋಂಟದಾರ್ಯ ಮಠದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಾವು ಹಿಂದೂ ವಿರೋಧಿಗಳಲ್ಲ, ಜೈನರು, ಸಿಖ್ರು, ಬೌದ್ಧರು ಹಿಂದೂ ವಿರೋಧಿಗಳಲ್ಲ. ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಡಾ. ಸಿದ್ದರಾಮ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಧರ್ಮ ಎಂದರೆ ಅದರದ್ದೆಯಾದ ಸಂವಿಧಾನ ಇರಬೇಕು ಎಂದಿದ್ದಾರೆ.

ಹಿಂದೂ ಧರ್ಮದಲ್ಲಿ ಓರ್ವ ಪ್ರವಾದಿ, ಯಾವುದೇ ನಿರ್ದಿಷ್ಟವಾದ ಗ್ರಂಥ ,  ನಿರ್ದಿಷ್ಟವಾದ ದೇವರಿಲ್ಲ. 33 ಕೋಟಿ ದೇವರನ್ನು ಪೂಜಿಸುತ್ತಾರೆ ಎಂದರು. ಭಗವದ್ಗೀತೆಯಲ್ಲಿ 18 ಅಧ್ಯಾಯಗಳಿವೆ. ಅದರಲ್ಲಿ ಯಾವ ಶ್ಲೋಕದಲ್ಲಿಯೂ ಹಿಂದೂ ಎಂಬ ಪದ ಇಲ್ಲ. ನಾವು ಹಿಂದೂ ವಿರೋಧಿಗಳಲ್ಲ, ಜೈನರು, ಸಿಖ್ರು, ಬೌದ್ಧರು ಹಿಂದೂ ವಿರೋಧಿಗಳಲ್ಲ. ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ ಹೇಳಿಕೆ ನೀಡಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular