ಮಂಗಳೂರು: ಹಿಂದೂ ಮುಖಂಡರೊಬ್ಬರ ಮೊಬೈಲ್ ನಲ್ಲಿ ರಾಜಕಾರಣಿ ಸೇರಿದಂತೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.
ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಎಂಬುವವರ ಮೊಬೈಲ್ ನಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆಯಾಗಿದೆ. ರಾಜಕಾರಣಿ ಮಾತ್ರವಲ್ಲ ಒಟ್ಟು 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆಗೆ ಸಂಬಂಧಿಸಿದಂತೆ ಮೂಡಬಿದರೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಅಪಘಾತವೆಸಗಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಗೊಳಿಸಿದ್ದ ಪ್ರಕರಣದಲ್ಲಿ ಸಮಿತ್ ರಾಜ್ ನನ್ನು ಇತ್ತೀಚೆಗೆ ಮೂಡಬಿದರೆ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಮೊಬೈಲ್ ಡೇಟಾ ಎಕ್ಸ್ ಟ್ರಾಕ್ಟ್ ಗೆ ಕೋರ್ಟ್ ಹಾಗೂ ಮೇಲಾಧಿಕಾರಿಗಳಿಂದ ಅನುಮತಿ ಪಡೆದು ಡೇಟಾ ಎಕ್ಸ್ ಟ್ರಾಕ್ಟ್ ಮಾಡುತ್ತಿದ್ದ ವೇಳೆ ಪೊಲೀಸರೇ ಶಾಕ್ ಆಗಿದ್ದಾರೆ. ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಮೊಬೈಲ್ ನಲ್ಲಿ ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಸಂದೇಶ್ ದೂರು ನೀಡಿದ್ದು, ಮೂಡಬಿದರೆ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡುವ, ಬೇರೆಯವರಿಗೆ ಕಲುಹಿಸುವ ಸಮಾಜದ ಸ್ವಾಸ್ಥ್ಯ ಹಾಳುಮಾಡುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.