HomeKarnatakaಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅರೆಸ್ಟ್

ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅರೆಸ್ಟ್

ದಾವಣಗೆರೆ: ಪ್ರಚೋದನಕಾರಿ ಭಾಷಣ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಸತೀಶ್ ಪೂಜಾರಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗದಲ್ಲಿ ಸತೀಶ್ ಪೂಜಾರಿ ಬಂಧಿಸಲಾಗಿದ್ದು, ದಾವಣಗೆರೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಸತೀಶ್ ಪೂಜಾರಿ ಬಂಧನವಾಗಿದೆ.

ಬಂಧಿತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ 14 ದಿನಗಳ ಕಾಲ ನ್ಯಯಾಂಗ ಬಂಧನ ವಿಧಿಸಿದೆ. ದ್ವೇಷ ಭಾಷಣ ಮಾಡಿದ್ದಕ್ಕೆ ದಾವಣಗೆರೆಯಲ್ಲಿ ಗಲಾಟೆ ನಡೆದಿದೆ ಎಂದು ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ. ಗಣೇಶ ವಿಸರ್ಜನೆ ಸಂದರ್ಭದಲ್ಲಿ ದಾವಣಗೆರೆಯಲ್ಲಿ ನಡೆದ ಗಲಾಟೆ, ಕಲ್ಲುತೂರಾಟ ಘಟನೆ ಬಳಿಕ ಸತೀಶ್ ಪೂಜಾರಿ ಅಜ್ಞಾತ ಸ್ಥಳಕ್ಕೆ ತೆರಳಿದ್ದು ತಿಳಿದುಬಂದಿತ್ತು. ಇದೀಗ ಸತೀಶ್ ಪೂಜಾರಿಯನ್ನು ಸಾಗರದಲ್ಲಿ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular