ಮಂಡ್ಯ: ವಿವಾದಿತ ಜಾಮೀಯಾ ಮಸೀದಿಯಲ್ಲಿ ಅಕ್ರಮ ಮದರಸಾ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಕ್ರಮವಾಗಿ ನಡೆಯುತ್ತಿರುವ ಮದರಸಾ ತೆರವುಗೊಳಿಸಬೇಕೆಂದು ಒತ್ತಾಯಿಸಲಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ವಿವಾದಿತ ಜಾಮಿಯಾ ಮಸೀದಿಯಲ್ಲಿ ಮದರಸಾ ನಡೆಯುತ್ತಿದೆ. ಪುರಾತತ್ವ ಇಲಾಖೆಗೆ ಒಳಪಡುವ ಜಾಮೀಯಾ ಮಸೀದಿ ಇದಾಗಿದೆ. ಇದರಲ್ಲಿ ನಡೆಯುತ್ತಿರುವ ಮದರಸಾ ತೆರವಿಗೆ ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ.
ಸರ್ಕಾರದ ಹಣದಲ್ಲಿ ನಿರ್ವಹಣೆ ಮಾಡುತ್ತಿರುವ ಮದರಸಾಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಜಿಲ್ಲಾಡಳಿತದ ಅನುಮತಿ ಪಡೆಯದೆ ಮದರಸಾ ನಡೆಯುತ್ತಿದ್ದು, ತೆರವುಗೊಳಿಸಬೇಕೆಂದು ಒತ್ತಾಯಿಸಲಾಗಿದೆ. ಬಜರಂಗದಳ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗೆ ಈ ಕುರಿತಾಗಿ ಪತ್ರ ಬರೆಯಲಾಗಿದೆ. ಅಕ್ರಮ ಮದರಸಾ ತೆರವುಗೊಳಿಸದಿದ್ದರೆ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

 
			 
		 
		 
		 
		 Loading ...
 Loading ... 
		 
		