‘ಹಿಂದೂ’ ಧರ್ಮದ ಸಮಾಜವೊಂದರಲ್ಲಿ 1 ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಿದ್ದಾರೆ: ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ..!

ಮಂಗಳೂರು: ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅರಣ್ಯಾಧಿಕಾರಿಯೊಬ್ಬ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ಹಿಂದೂ ಸಮಾಜವೊಂದರಲ್ಲಿ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಿದ್ದಾರೆ ಎಂದು ನಾಲಿಗೆ ಹರಿಬಿಟ್ಟಿದ್ದಾನೆ.

ಆಡಿಯೋ ವೈರಲ್ ಬೆನ್ನಲ್ಲೇ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಪೊಲೀಸ್ ಠಾಣೆ ಸೆರಿದಂತೆ ಎರಡು ಠಾಣೆಯಲ್ಲಿ ಸಂಜೀವ ಪೂಜಾರಿ ವಿರುದ್ಧ ದೂರು ದಾಖಲಿಸಿದ್ದಾರೆ.

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎರಡು ದಿನಗಳ ಹಿಂದೆ ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಸ್ಲಿಂರ ಪರವಾಗಿ ಪೋಸ್ಟ್ ಹಾಕಿದ್ದ. ಸಹಾಯ ಮಾಡುವುದರಲ್ಲಿ ಮುಸ್ಲೀಮರು ಎತ್ತಿದ ಕೈ ಎಂದು ಶ್ಲಾಘಿಸಿದ್ದ. ಈ ಪೋಸ್ಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಹಿಂದೂ ಸಂಘಟನೆ ಕಾರ್ಯಕರ್ತ ಸುರೇಶ್ ಕಾಸರಗೋಡು, ಸಂಜೀವ್ ಪೂಜಾರಿಗೆ ಕರೆ ಮಾಡಿ ಪ್ರಶ್ನಿಸಿದ್ದರು.

ಸುರೇಶ್ ಕಾಸರಗೋಡು ಜೊತೆ ದೂರವಾಣಿಯಲ್ಲಿ ಮಾತನಾಡುತ್ತ ಸಂಜೀವ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮುದಾಯಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಿದ್ದಾರೆ. ಇದಕ್ಕೆ ನನ್ನ ಬಳಿ 10 ಸಾವಿರ ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣ. ಭಜನೆ ಮಾಡಿದ ಹೆಣ್ಣುಮಕ್ಕಳನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ಅವಹೇಳನಕಾರಿಯಾಗಿ ನಾಲಿಗೆ ಹರಿಬಿಟ್ಟಿದ್ದಾನೆ.

ಸಂಜೀವ್ ಪೂಜಾರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತಕ್ಷಣ ಆತನನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read