HomeLatest NewsBREAKING : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಹಿಂದೂ ಕಾರ್ಯಕರ್ತರ ವಿರುದ್ಧ 'FIR' ದಾಖಲು

BREAKING : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಹಿಂದೂ ಕಾರ್ಯಕರ್ತರ ವಿರುದ್ಧ ‘FIR’ ದಾಖಲು

ಮಂಗಳೂರು: ಕೋಮುಸಾಮರಸ್ಯ ಕದಡುವಂತೆ ಮಾಡಿರುವ ಸಾಲು ಸಾಲು ಹತ್ಯೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೂದು ಮುಚ್ಚಿದ ಕೆಂಡದಂತಹ ಸ್ಥಿತಿ ನಿರ್ಮಿಸಿದೆ. ಈ ನಡುವೆ 15 ಹಿಂದೂ ಕಾರ್ಯಕರ್ತರ ಮೇಲೆ ಎಫ್ ಐ ಆರ್ ದಾಖಲಾಗಿದೆ.

ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಪ್ರತಿಕಾರವಾಗಿ ಅಬ್ದುಲ್ ರಹಿಮಾನ್ ಹತ್ಯೆ ಘಟನೆ ನಡೆದಿರುವ ಬೆನ್ನಲ್ಲೇ ದಕ್ಷಿಣ ಕನ್ನದ ಜಿಲ್ಲೆಯಲ್ಲಿ ಸರಣಿ ಕೊಲೆ ಬೆನ್ನಲೇ ರಾತ್ರೋ ರಾತ್ರಿ ನೂತನ ಎಸ್ ಪಿ ಹಿಂದೂ ಸಂಘಟನೆಗಳ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮಧ್ಯರಾತ್ರಿ ಮನೆಗಳಿಗೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಖ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಈ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡಿದ್ದ ಕಾರ್ಯಕರ್ತರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಅನುಮತಿ ಪಡೆಯದೇ ಗುಂಪುಕಟ್ಟಿಕೊಂಡು ಬಂದು ಕಡಬ ಠಾಣೆಯ ಮುಂದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಎಫ್ ಐ ಆರ್ ದಾಖಲಿಸಲಾಗಿದೆ.

ಪ್ರಮೋದ್ ರೈ ನಂದಗುರಿ, ತಿಲಕ್ ನಂದಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ್ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನುಂದಗುರಿ, ಶ್ರೇಯತ್, ಉಮೇಶ್ , ರಾಧಾಕೃಷ್ಣ, ಜಯಂತ್ ಸೇರಿದಂತೆ 15 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular