ಜ್ಞಾನವಾಪಿ ಮಸೀದಿ ವಿವಾದದಲ್ಲಿ ಹಿಂದೂಗಳಿಗೆ ದೊಡ್ಡ ಗೆಲುವು ಸಿಕ್ಕಿದ್ದು, ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ ಕೋರ್ಟ್ ಅವಕಾಶ ನೀಡಿದೆ.
ಉತ್ತರ ಪ್ರದೇಶದ ವಾರಣಾಸಿ ಜಿಲ್ಲಾ ಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ. ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜಿಸಲು ಹಿಂದೂಗಳಿಗೆ ಕೋರ್ಟ್ ಅನುಮತಿ ನೀಡಿದೆ.
https://twitter.com/ANI/status/1752631382034338207?ref_src=twsrc%5Egoogle%7Ctwcamp%5Eserp%7Ctwgr%5Etweet
https://twitter.com/ANI/status/1752631595780170143?ref_src=twsrc%5Egoogle%7Ctwcamp%5Eserp%7Ctwgr%5Etweet
ಇದರ ನಡುವೆ ಇಂದು ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಜ್ಞಾನವಾಪಿ ಸಮೀಕ್ಷೆಯ ವರದಿಯು ಪರಿಗಣಿಸಲು ಯೋಗ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.