BIG NEWS : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಹಿಂದೂಗಳ ಹತ್ಯೆ ಆಗುತ್ತೆ : ಮಾಜಿ ಸಚಿವ R. ಅಶೋಕ್ ವಾಗ್ಧಾಳಿ

ಮಂಡ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಹಿಂದೂಗಳ ಹತ್ಯೆ ಆಗುತ್ತದೆ ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದರು .

ಶಿವಮೊಗ್ಗ ಗಲಭೆ ಪ್ರಕರಣದ ಕುರಿತು ಮಾತನಾಡಿದ ಮಾಜಿ ಸಚಿವ ಅಶೋಕ್  ‘ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಅಶೋಕ್ ಈ ಹಿಂದೆ ಕೂಡ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗ ಹಿಂದೂಗಳ ಕೊಲೆ ಆಗಿತ್ತು. ಭಯೋತ್ಪಾದಕ ಸಂಘಟನೆಗಳಿಗೆ ಭಯ ಇಲ್ಲದಂತಾಗಿದೆ. ಅವರು ಏನೇ ಮಾಡಿದರೂ ಸರ್ಕಾರ ಕೇಸ್ ವಾಪಸ್ ತೆಗೆದುಕೊಳ್ಳುತ್ತದೆ. ಆದ್ದರಿಂದ ಅವರಿಗೆ ಭಯ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಹಿಂದೂಗಳ ಹತ್ಯೆ ಆಗುತ್ತದೆ’ ಎಂದು ವಾಗ್ಧಾಳಿ ನಡೆಸಿದರು .

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಷ್ಟು ವರ್ಷ ಇರುತ್ತೋ ಗೊತ್ತಿಲ್ಲ. ಆದರೆ ಪೊಲೀಸರು ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಅಂದರೆ ಪೊಲೀಸರ ಬಗ್ಗೆ ಇರುವ ಕಾನ್ ಫಿಡೆನ್ಸ್ ಕೂಡ ಹೋಗುತ್ತದೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read