HomeKarnatakaಹಿರೇಮಗಳೂರು ಕಣ್ಣನ್ ಗೆ ಹೆಚ್ಚು ಹಣ ಪಾವತಿಸಿದ್ದ ಅಧಿಕಾರಿ, ಸಿಬ್ಬಂದಿಯಿಂದಲೇ ಹಣ ವಸೂಲಿಗೆ ಸೂಚನೆ

ಹಿರೇಮಗಳೂರು ಕಣ್ಣನ್ ಗೆ ಹೆಚ್ಚು ಹಣ ಪಾವತಿಸಿದ್ದ ಅಧಿಕಾರಿ, ಸಿಬ್ಬಂದಿಯಿಂದಲೇ ಹಣ ವಸೂಲಿಗೆ ಸೂಚನೆ

ಚಿಕ್ಕಮಗಳೂರು: ಹಿರೇಮಗಳೂರು ಕಣ್ಣನ್ ಅವರಿಗೆ ಮಂಜೂರಾದ ತಸ್ತೀಕ್ ಹಣಕ್ಕಿಂತ ಹೆಚ್ಚು ಪಾವತಿಸಿದ್ದ ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ನೀಡಿ ಅವರಿಂದಲೇ ಹಣ ವಸೂಲಿ ಮಾಡುವಂತೆ ಮುಜರಾಯಿ ಇಲಾಖೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಕನ್ನಡದ ಪೂಜಾರಿ ಎಂದೇ ಖ್ಯಾತರಾದ ಹಿರೇಮಗಳೂರು ಕಣ್ಣನ್ ಅವರಿಗೆ ಹೆಚ್ಚುವರಿ ತಸ್ತೀಕ್ ಹಣ ಪಾವತಿಯಾದ ಬಗ್ಗೆ ನೋಟಿಸ್ ನೀಡಲಾಗಿದ್ದು, ಅದನ್ನು ಹಿಂಪಡೆಯುವಂತೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ತಪ್ಪಾಗಿ ಹಣ ಪಾವತಿಸಿದ ಅಂದಿನ ತಹಶೀಲ್ದಾರ್ ಮತ್ತು ಸಿಬ್ಬಂದಿ ವಿಚಾರಣೆ ನಡೆಸಿ ಅವರಿಂದಲೇ ಹಣ ವಸೂಲಿ ಮಾಡಬೇಕು. ಇದೇ ತಕ್ಕ ಶಿಕ್ಷೆ ಎಂದು ಹೇಳಿದ್ದಾರೆ. ಹಿರೇಮಗಳೂರು ಕೋದಂಡರಾಮ ದೇವಾಲಯದ ಪ್ರಧಾನ ಅರ್ಚಕ ಕಣ್ಣನ್ ಅವರಿಗೆ ಒಂಬತ್ತು ವರ್ಷಗಳಿಂದ ಹೆಚ್ಚುವರಿಯಾಗಿ ಪಾವತಿಯಾದ 4.74 ಲಕ್ಷ ರೂ. ಹಿಂತಿರುಗಿಸಬೇಕು ಎಂದು ಚಿಕ್ಕಮಗಳೂರು ತಹಶೀಲ್ದಾರ್ ಡಿಸೆಂಬರ್ 2ರಂದು ನೋಟಿಸ್ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular