HomeLatest Newsಸಚಿನ್, ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ

ಸಚಿನ್, ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗೆಲುವು ಸಾಧಿಸಿದೆ.

ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 131 ರನ್ ಗಳಿಸಿದ್ದಾರೆ. ಇದರೊಂದಿಗೆ ಅವರು ಹಲವು ದಾಖಲೆ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೋಹಿತ್ ಶರ್ಮಾ ಎಲ್ಲಾ ಮಾದರಿಯಲ್ಲಿಯೂ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಕ್ರಿಸ್ ಗೇಲ್ ಅವರ ದಾಖಲೆ ಹಿಂದಿಕ್ಕಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌

556 – ರೋಹಿತ್ ಶರ್ಮಾ

553 – ಕ್ರಿಸ್ ಗೇಲ್

476 – ಶಾಹಿದ್ ಅಫ್ರಿದಿ

398 – ಬ್ರೆಂಡನ್ ಮೆಕಲಮ್

383 – ಮಾರ್ಟಿನ್ ಗಪ್ಟಿಲ್

ವಿಶ್ವಕಪ್ ನಲ್ಲಿ ಅತಿ ವೇಗವಾಗಿ ಒಂದು ಸಾವಿರ ರನ್ ಪೂರೈಸಿದ ಭಾರತದ ಮೊದಲ ಹಾಗೂ ವಿಶ್ವದ ಎರಡನೇ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 23 ರನ್ ಗಳಿಸಿದ ವೇಳೆ ರೋಹಿತ್ ಶರ್ಮಾ 19 ಇನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದರು. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಕೂಡ 19 ಇನ್ನಿಂಗ್ಸ್ ಗಳಲ್ಲಿ ವಿಶ್ವಕಪ್ ನಲ್ಲಿ 1000 ರನ್ ಪೂರೈಸಿದ್ದಾರೆ. ರೋಹಿತ್ ಶರ್ಮಾ ವಿಶ್ವಕಪ್ ನಲ್ಲಿ 1000 ರನ್ ಗಳಿಸಿದ ಭಾರತದ ನಾಲ್ಕನೇ ಆಟಗಾರ ಆಗಿದ್ದಾರೆ.

ವಿಶ್ವಕಪ್‌ ನಲ್ಲಿ ಕಡಿಮೆ ಇನ್ನಿಂಗ್ಸ್ ನಲ್ಲಿ 1,000 ರನ್‌

19 – ಡೇವಿಡ್ ವಾರ್ನರ್

19 – ರೋಹಿತ್ ಶರ್ಮಾ

20 – ಸಚಿನ್ ತೆಂಡೂಲ್ಕರ್

20 – ಎಬಿ ಡಿ’ ವಿಲಿಯರ್ಸ್

21 – ಸರ್ ವಿವಿಯನ್ ರಿಚರ್ಡ್ಸ್

21 – ಸೌರವ್ ಗಂಗೂಲಿ

ಇನ್ನು ರೋಹಿತ್ ಶರ್ಮಾ ವಿಶ್ವಕಪ್ ನಲ್ಲಿ ಅತ್ಯಧಿಕ ಶತಕ ಗಳಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ರೋಹಿತ್ ಶರ್ಮಾ ವಿಶ್ವಕಪ್ ನಲ್ಲಿ 7 ಶತಕ ಸಿಡಿಸಿದ್ದಾರೆ.

ವಿಶ್ವಕಪ್ ನಲ್ಲಿ ಅತ್ಯಧಿಕ ಶತಕ ಗಳಿಸಿದವರು

7 ರೋಹಿತ್ ಶರ್ಮಾ

6 ಸಚಿನ್ ತೆಂಡೂಲ್ಕರ್

5 ರಿಕಿ ಪಾಂಟಿಂಗ್

5 ಕುಮಾರ ಸಂಗಕ್ಕಾರ

ರೋಹಿತ್ ಭಾರತದ ಮಾಜಿ ನಾಯಕ ಗಂಗೂಲಿಯನ್ನು ಹಿಂದಿಕ್ಕಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರರಾದರು. ಸಚಿನ್ ತೆಂಡೂಲ್ಕರ್ 2278 ರನ್‌, ವಿರಾಟ್ ಕೊಹ್ಲಿ(1115) ಮತ್ತು ರೋಹಿತ್ ಶರ್ಮಾ ನಂತರದ ಸ್ಥಾನದಲ್ಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular