ಬಾಲಿವುಡ್ ಸ್ಟಾರ್ ನಟ ರಣ್‌ಬೀರ್ ಕಪೂರ್ ಅಭಿನಯದ ಬಹುನಿರೀಕ್ಷಿತ ಪೌರಾಣಿಕ ಬ್ರಹ್ಮಾಂಡದ ಸಿನಿಮಾ ರಾಮಾಯಣ ಬಾಕ್ಸ್‌ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಪ್ರಮುಖ ಒಟಿಟಿ ಮತ್ತು ಟಿಕೆಟಿಂಗ್ ಪ್ಲಾಟ್‌ಫಾರ್ಮ್ ಆದ ಬುಕ್‌ಮೈಶೋನಲ್ಲಿ ಅತ್ಯಧಿಕ ಟಿಕೆಟ್ ಮಾರಾಟದ ಮೂಲಕ ಈ ಸಿನಿಮಾ ಹೊಸ ದಾಖಲೆ ಬರೆದಿದೆ. ನಮಿತ್ ಮಲ್ಹೋತ್ರಾ ನಿರ್ಮಾಣದ ಈ ಬ್ರಹ್ಮಾಂಡದ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ.
ಬುಕ್‌ಮೈಶೋ ಇತಿಹಾಸದಲ್ಲೇ ಅತ್ಯಂತ ಕಡಿಮೆ ಸಮಯದಲ್ಲಿ ಅಂದರೆ ಕೇವಲ ಒಂದು ಗಂಟೆಯಲ್ಲಿ ಅತಿ ಹೆಚ್ಚು ಟಿಕೆಟ್‌ಗಳು ಮಾರಾಟವಾದ ಹೆಗ್ಗಳಿಗೆ ರಾಮಾಯಣ ಪಾತ್ರವಾಗಿದೆ. ಈ ಚಿತ್ರವು ಪ್ರತಿ ಗಂಟೆಗೆ ಬರೋಬ್ಬರಿ 111.83 ಸಾವಿರ ಟಿಕೆಟ್‌ಗಳ ಮಾರಾಟದೊಂದಿಗೆ ಹಿಂದೆ ದಾಖಲಾಗಿದ್ದ ಧುರಂಧರ್ 2 ಚಿತ್ರದ ದಾಖಲೆಯನ್ನು ಮುರಿದು ಮುನ್ನಡೆದಿದೆ. ಇದು ಭಾರತೀಯ ಸಿನಿಮಾರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ವರದಿಯಾಗಿದೆ.
ಬೃಹತ್ ಬಜೆಟ್‌ನಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಿರುವ ಈ ವಿಎಫ್‌ಎಕ್ಸ್ ಶ್ರೀಮಂತ ಚಿತ್ರದಲ್ಲಿ ರಣ್‌ಬೀರ್ ಕಪೂರ್ ಜೊತೆಗೆ ಪ್ರಮುಖ ಪಾತ್ರಗಳಲ್ಲಿ ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರಲ್ಲದೆ ರವಿ ದುಬೆ, ಸನ್ನಿ ಡಿಯೋಲ್, ಅರುಣ್ ಗೋವಿಲ್, ಲಾರಾ ದತ್ತ, ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ವಿಶೇಷವೆಂದರೆ ಖ್ಯಾತ ಸಂಗೀತ ನಿರ್ದೇಶಕರುಗಳಾದ ಹ್ಯಾನ್ಸ್ ಜಿಮ್ಮರ್ ಹಾಗೂ ಎ.ಆರ್. ರಹಮಾನ್ ಒಟ್ಟಾಗಿ ಈ ಚಿತ್ರಕ್ಕೆ ಅದ್ಭುತ ಸಂಗೀತ ಸಂಯೋಜನೆ ಮಾಡಿದ್ದಾರೆ.

