HomeKarnatakaಮತ್ತೊಂದು ಹಿಟ್ & ರನ್ ಕೇಸ್; ಬೈಕ್ ಸವಾರನಿಗೆ ಗುದ್ದಿ ಪರಾರಿಯಾದ ವಾಹನ ಚಾಲಕ; ವ್ಯಕ್ತಿ...

ಮತ್ತೊಂದು ಹಿಟ್ & ರನ್ ಕೇಸ್; ಬೈಕ್ ಸವಾರನಿಗೆ ಗುದ್ದಿ ಪರಾರಿಯಾದ ವಾಹನ ಚಾಲಕ; ವ್ಯಕ್ತಿ ಸ್ಥಿತಿ ಗಂಭಿರ

ಬೆಂಗಳೂರು: ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕೋಲಾರ ರೋಡ್ ನಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರನ ತಲೆ ಒಡೆದು ರಕ್ತ ಚಿಮ್ಮಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಡಾ. ಸುಪ್ರಿತ್ ಎನ್ನುವವರು ವ್ಯಕ್ತಿಗೆ ಶಸ್ತ್ರ ಚಿಕಿತ್ಸೆ ನೀಡಿ ಜೀವ ಉಳಿಸಿದ್ದಾರೆ. ಆದರೆ ಈವರೆಗೂ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular