HomeKarnatakaಆಗ ಹಣ ಕೊಡ್ತೀವಿ ಅಂದ್ರೂ ಅಕ್ಕಿ ಕೊಡಲಿಲ್ಲ, ಈಗ ಬರ ಇದ್ರೂ ಒಂದೇ ಒಂದು ರೂ....

ಆಗ ಹಣ ಕೊಡ್ತೀವಿ ಅಂದ್ರೂ ಅಕ್ಕಿ ಕೊಡಲಿಲ್ಲ, ಈಗ ಬರ ಇದ್ರೂ ಒಂದೇ ಒಂದು ರೂ. ಕೊಟ್ಟಿಲ್ಲ: ಕೇಂದ್ರದ ವಿರುದ್ಧ ಸಚಿವ ಹೆಚ್.ಕೆ. ಪಾಟೀಲ್ ವಾಗ್ದಾಳಿ

ಹಾವೇರಿ: ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡದಂತೆ ಬಿಜೆಪಿ ಷಡ್ಯಂತ್ರ ಮಾಡಿತ್ತು. ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಹೆಚ್ಚುವರಿ ಅಕ್ಕಿ ಕೇಳಿದ್ದೆವು. ಹಣ ಕೊಡುತ್ತೇವೆ ಎಂದರೂ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ ಎಂದು ಸಚಿವ ಹೆಚ್.ಕೆ. ಪಾಟೀಲ್ ದೂರಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಅಕ್ಕಿ ಕೊಡದೆ ಖಾಸಗಿ ವ್ಯಕ್ತಿಗಳಿಗೆ ಅಕ್ಕಿ ಮಾರಾಟ ಮಾಡಿದರು. ಆದರೂ ನಾವು ಘೋಷಿಸಿದಂತೆ ಗ್ಯಾರಂಟಿ ಯೋಜನೆ ಜಾರಿಗೆ ತಂದೆವು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬರಗಾಲದಿಂದ 34,000 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಕೇಂದ್ರದ ನಿಯಮಾವಳಿ ಪ್ರಕಾರ 5000 ಕೋಟಿ ರೂ. ಪರಿಹಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ಇದುವರೆಗೆ ಒಂದು ರೂಪಾಯಿ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ದೂರಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕವನ್ನು ಮಲತಾಯಿ ಮಕ್ಕಳಂತೆ ನೋಡುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular