HomeKarnatakaBIG NEWS: ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು ಮಾಡಿ: ಸ್ಪೀಕರ್ ಗೆ ಸಚಿವ ಹೆಚ್.ಕೆ. ಪಾಟೀಲ್...

BIG NEWS: ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು ಮಾಡಿ: ಸ್ಪೀಕರ್ ಗೆ ಸಚಿವ ಹೆಚ್.ಕೆ. ಪಾಟೀಲ್ ಪತ್ರ

ಬೆಂಗಳೂರು: ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಪತ್ರ ಬರೆದಿದ್ದಾರೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಪತನಕ್ಕೆ ಕಾರಣವಾದ ಅತ್ಯಂತ ಹೇಯ ಭಾಷೆ ಬಳಸಿ ಕೀಳು ಅಭಿರುಚಿ ಪ್ರದರ್ಶಿಸಿದ ಮಾತುಗಳನ್ನು ಶಾಸಕ ಮುನಿರತ್ನ ಆಡಿದ್ದಾರೆ. ಇಂತಹ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ತಡೆಯಲು ನೀತಿ ನಿರೂಪಣಾ ಸಮಿತಿ ರಚಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸದನದ ಒಳಗೆ ಹೊರಗೆ ಅಸಭ್ಯವಾಗಿ ವರ್ತಿಸುವ ಶಾಸಕರನ್ನು ನಿಯಂತ್ರಿಸುವ ನಿಯಮಗಳನ್ನು ರೂಪಿಸಬೇಕು. ಅಂತಹ ಶಾಸಕರ ವಿರುದ್ಧ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವ ಅಗತ್ಯವಿದೆ. ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭಾಧ್ಯಕ್ಷರು ಹಕ್ಕು ಬಾಧ್ಯತೆ ಸಮಿತಿಗೆ ಪ್ರಶ್ನೆಗಳನ್ನು ಕಳುಹಿಸಬಹುದು. ಸಮಿತಿಯಿಂದ ಪರಿಶೀಲನೆ ನಡೆಸಿ ಶಿಫಾರಸು ಮಾಡಬಹುದು. ಶಿಫಾರಸುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಅನುಸರಿಸಬೇಕಾದ ಕಾರ್ಯವಿಧಾನವನ್ನು ಸೂಚಿಸಬಹುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಇರುವ ಪರಮಾಧಿಕಾರ ಚಲಾಯಿಸಿ ವಿಶೇಷ ಕ್ರಮ ಕೈಗೊಳ್ಳುವ ಮೂಲಕ ಮುನಿರತ್ನ ಅವರನ್ನು ಅಮಾನತು ಮಾಡಬೇಕು. ಇಂತಹ ಅಸಭ್ಯ ವರ್ತನೆಗಳಿಗೆ ವಿಧಾನ ಮಂಡಲ ಶೂನ್ಯ ಸಹನೆ ಹೊಂದಿರಬೇಕು ಎಂದು ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular