BREAKING : ರಾಜ್ಯಾದ್ಯಂತ 1 ಸಾವಿರ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಚಿಂತನೆ : ಸಚಿವ H.K ಪಾಟೀಲ್

ಗದಗ : ರಾಜ್ಯಾದ್ಯಂತ ಒಂದು ಸಾವಿರ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯಾದ್ಯಂತ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೆಲವು ನಿಯಮಗಳನ್ನು ರೂಪಿಸಿ ಜೆಎಂಎಫ್ ಮಾದರಿಯಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪನೆ ಮಾಡುತ್ತೇವೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.

ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್ ತಡೆಯಬೇಕು, ಅದು ಅವರ ಜವಾಬ್ದಾರಿ. ಅದು ನಮ್ಮ ಕೈಯಲ್ಲಿ ಇಲ್ಲ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.

‘ಪೆನ್ ಡ್ರೈವ್’ ಹೆಸರಿನಲ್ಲಿ HDK ದಂಧೆ ನಡೆಸುತ್ತಿದ್ದಾರೆ : ಸಚಿವ ರಾಜಣ್ಣ ವಾಗ್ಧಾಳಿ

ಮೈಸೂರು : ಪೆನ್ ಡ್ರೈವ್ ಹೆಸರಿನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ದಂಧೆ ನಡೆಸುತ್ತಿದ್ದಾರೆ ಎಂದು ಸಹಕಾರ ಸಚಿವ ರಾಜಣ್ಣ ವಾಗ್ಧಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಹಕಾರ ಸಚಿವ ರಾಜಣ್ಣ ‘ ವಿಧಾನಸೌಧದಲ್ಲಿ ಪೆನ್ ಡ್ರೈವ್ ಪ್ರದರ್ಶನ ಮಾಡುತ್ತೇನೆ ಎಂದು ಕುಮಾರಸ್ವಾಮಿ ಸುಮ್ಮನೆ ಹೇಳಿಕೆ ಕೊಡುತ್ತಿದ್ದಾರೆ. ತಾಕತ್ ಇದ್ರೆ ಪೆನ್ ಡ್ರೈವ್ ನಲ್ಲಿ ಏನಿದೆ ಎಂದು ತೋರಿಸಲಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ. ಕುಮಾರಸ್ವಾಮಿ ವಿಳಂಬ ಮಾಡುವುದರಲ್ಲಿ ಉದ್ದೇಶ ಏನು ..? ಹೆಚ್ಡಿಕೆ ಪೆನ್ ಡ್ರೈವ್ ಇಟ್ಟುಕೊಂಡು ಏನಾದರೂ ದಂಧೆ ನಡೆಸುತ್ತಿದ್ದಾರಾ..? ಎಂದು ಸಹಕಾರ ಸಚಿವ ರಾಜಣ್ಣ ವಾಗ್ಧಾಳಿ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read