HomeKarnatakaಗೆಲುವು ಕಷ್ಟವೆಂದ ಸಮೀಕ್ಷೆ: ಹಾಲಿ ಶಾಸಕನಿಗೆ ಬಿಗ್ ಶಾಕ್: ಹರಿಹರಕ್ಕೆ ಹೆಚ್.ಎಂ. ರೇವಣ್ಣ...?

ಗೆಲುವು ಕಷ್ಟವೆಂದ ಸಮೀಕ್ಷೆ: ಹಾಲಿ ಶಾಸಕನಿಗೆ ಬಿಗ್ ಶಾಕ್: ಹರಿಹರಕ್ಕೆ ಹೆಚ್.ಎಂ. ರೇವಣ್ಣ…?

ದಾವಣಗೆರೆ: ಹರಿಹರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ವರಿಷ್ಠರ ಬಳಿ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಹೆಚ್.ಎಂ. ರೇವಣ್ಣ ತಿಳಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹರಿಹರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವ ಕುರಿತಾಗಿ ಚರ್ಚೆ ನಡೆದಿದ್ದು, ನಾನು ಕೂಡ ಆಕಾಂಕ್ಷಿತನಾಗಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಕ್ಷೇತ್ರದ ಕಾರ್ಯಕರ್ತರು, ಹಿತೈಷಿಗಳು ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರಿಹರದ ಹಾಲಿ ಶಾಸಕ ಎಸ್. ರಾಮಪ್ಪ ನಮ್ಮದೇ ಸಮುದಾಯದವರು. ಸಮೀಕ್ಷೆಯಲ್ಲಿ ಅವರಿಗೆ ಗೆಲುವು ಕಷ್ಟವೆಂದು ವರದಿ ಬಂದ ಹಿನ್ನೆಲೆಯಲ್ಲಿ ನಾನು ಟಿಕೆಟ್ ಕೇಳುತ್ತಿದ್ದೇನೆ. ರಾಮಪ್ಪ ಅವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ಕೊಡುವುದಾದರೆ ನನಗೆ ಸ್ಪರ್ಧೆಗೆ ಅವಕಾಶ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದು ರೇವಣ್ಣ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular